Homeಮುಖಪುಟಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

ಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ಮಾಜಿ ಐಪಿಎಸ್‌ ಅಧಿಕಾರಿ ಅಮಿತಾಬ್‌ ಠಾಕೂರ್‌ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಅವರಿಗೆ ಬೆದರಿಕೆ ಹಾಕಿದ ಆರೋಪ ಹೊತ್ತಿದ್ದ ಅಮಿತಾಬ್‌ ಠಾಕೂರ್‌ ಅವರಿಗೆ ಒಕ್ಕೂಟ ಸರ್ಕಾರದ ಗೃಹ ಸಚಿವಾಲಯವು ಮಾರ್ಚ್‌ 23 ರಂದು ಕಡ್ಡಾಯ ನಿವೃತ್ತಿ ನೀಡಿತ್ತು. ಅಲ್ಲದೆ, ಠಾಕೂರ್‌ ಅವರು ಸೇವೆಯಲ್ಲಿ ಮುಂದುವರೆಯಲು ಯೋಗ್ಯವಾಗಿಲ್ಲ, ಅವರಿಗೆ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಅಕಾಲಿಕ ನಿವೃತ್ತಿ ನೀಡಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿತ್ತು.

ಕಡ್ಡಾಯ ನಿವೃತ್ತಿ ಪಡೆದು ಸೇವೆಯಿಂದ ಹೊರಬಂದಿರುವ ಅಮಿತಾಬ್‌ ಠಾಕೂರ್‌ ಅವರು ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅಮಿತಾಬ್ ಠಾಕೂರ್ ಅವರ ಪತ್ನಿ ನೂತನ್ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

“ಇದು ತತ್ವಗಳಿಗಾಗಿ ನಡೆಯುವ ಹೋರಾಟ. ಆದಿತ್ಯನಾಥ್ ಅವರು ತಮ್ಮ ಅವಧಿಯಲ್ಲಿ ಅನೇಕ ಅನುಚಿತ, ದಮನಕಾರಿ, ಕಿರುಕುಳ ಮತ್ತು ತಾರತಮ್ಯದ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರನ್ನು ಚುನಾವಣೆಯಲ್ಲಿ ಮಣಿಸಬೇಕು. ಹೀಗಾಗಿ ಅಮಿತಾಬ್ ಅವರು ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಅಮಿತಾಬ್‌ ಠಾಕೂರ್‌ ಅವರ ಸೇವಾವಧಿ 2028 ರಲ್ಲಿ ಅಂತ್ಯಗೊಳ್ಳುವುದಿತ್ತು. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರನ್ನು ಜುಲೈ 13, 2015 ರಂದು ಅಮಾನತುಗೊಳಿಸಲಾಗಿತ್ತು.

ಆದರೆ, ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಲಕ್ನೋ ಪೀಠವು 2016 ರ ಏಪ್ರಿಲ್‌ನಲ್ಲಿ ಅವರ ಅಮಾನತಿಗೆ ತಡೆ ನೀಡಿತು. ಅಲ್ಲದೆ, ಅಕ್ಟೋಬರ್ 11, 2015 ರಿಂದ ಜಾರಿಗೆ ಬರುವಂತೆ ಪೂರ್ಣ ವೇತನದೊಂದಿಗೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸುವಂತೆ ಆದೇಶಿಸಿತ್ತು. ಇದೆಲ್ಲದರ ನಡುವೆ ಇದೀಗ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ.

ಇದನ್ನೂ ಓದಿ: ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...