ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು (ಜೂನ್ 25) ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಂವಿಧಾನದ ಪ್ರತಿಯನ್ನು ಕೈಯ್ಯಲ್ಲಿ ಹಿಡಿದುಕೊಂಡು ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಸೆಂಥಿಲ್ ಗಮನ ಸೆಳೆದರು. ಬಳಿಕ ಸಂಸತ್ತಿನಲ್ಲಿ ಮಾತನಾಡಿದ ಅವರು, “ಅಲ್ಪಸಂಖ್ಯಾತರು, ದಲಿತರು ಮತ್ತು ಆದಿವಾಸಿಗಳ ಮೇಲಿನ ನಾಚಿಕೆಗೇಡಿನ ದೌರ್ಜನ್ಯವನ್ನು ನಿಲ್ಲಿಸಿ. ಜೈ ಭೀಮ್, ಜೈ ಸಂವಿಧಾನ” ಎಂದರು.
#18thLokSabha: Sasikanth Senthil , (INC) takes oath as Member of Parliament (Tiruvallur (SC), Tamil Nadu )#Parliament | #LokSabha #RajyaSabha #parliamentsession @LokSabhaSectt pic.twitter.com/PVyJqsbJMR
— SansadTV (@sansad_tv) June 25, 2024
ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೆಂಥಿಲ್ ಅವರು, 5,72,155 ಮತಗಳ ಅಂತರದಿಂದ ದಾಖಲೆಯ ಗೆಲುವನ್ನು ಸಾಧಿಸಿದ್ದಾರೆ.
ಆರಂಭದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸೆಂಥಿಲ್, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡು 2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾದರು. ಬಳಿಕ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸೇರಿದಂತೆ ಹಲವು ಹುದ್ದೆಗಳನ್ನು ಅವರು ನಿಭಾಯಿಸಿದ್ದಾರೆ. ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ವಾರ್ ರೂಮ್ ಜವಾಬ್ದಾರಿ ಹೊತ್ತಿದ್ದ ಸೆಂಥಿಲ್, ಪಕ್ಷದ ಅಭೂತಪೂರ್ವ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿವರಲ್ಲಿ ಪ್ರಮುಖರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲೂ ಕಾರ್ಯತಂತ್ರಗಳನ್ನು ರೂಪಿಸಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಅವರ ಶ್ರಮಿಸಿದ್ದರು.
ಇದನ್ನೂ ಓದಿ : ಡಿಸೆಂಬರ್ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ


