Homeಮುಖಪುಟಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

"ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು" ಎಂದು ಕಳೆದ ವರ್ಷ ರಾಜೀನಾಮೆ ನೀಡಿದ್ದರು.

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ ಕೆಲವೇ ತಿಂಗಳುಗಳಲ್ಲಿ ಮತ್ತೊರ್ವ ಐಎಎಸ್ ಅಧಿಕಾರಿ ತಮಿಳುನಾಡು ರಾಜಕೀಯಕ್ಕೆ ಬರಲಿದ್ದಾರೆ. ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರಲಿದ್ದಾರೆ. ಈ ಬಗ್ಗೆ ತಾವೇ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ತನ್ನ ದಕ್ಷತೆ, ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್, ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟರು. ಇವರು “ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂಬ ಹೇಳಿಕೆಯಿಂದ ಜನರಲ್ಲಿ ಅಚ್ಚರಿ ಉಂಟುಮಾಡಿದ್ದರು. ಜೊತೆಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಟ್ವಿಟರ್‌ನಲ್ಲಿ ತಮ್ಮ ನಿಲುವನ್ನು ಪೋಸ್ಟ್ ಮಾಡಿರುವ ಸಸಿಕಾಂತ್ ಸೆಂಥಿಲ್ ’ಹೋರಾಟವನ್ನು ಮುಂದುವರೆಸುವ ನನ್ನ ಪ್ರಯತ್ನದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ನಾನು ಎಲ್ಲರಿಗೂ ತಿಳಿಸಲು ಬಯಸುತ್ತೇನೆ’ ಎಂದಿದ್ದಾರೆ.

’ನಾನು ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿದ್ದೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ಭರವಸೆ ನೀಡಿದ್ದಾರೆ.

ಮಾಜಿ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಅವರು ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಈ ಕುರಿತು ಈಗಾಗಲೇ ಕಾಂಗ್ರೆಸ್​ ನಾಯಕರು ಸಸಿಕಾಂತ್ ಸೆಂಥಿಲ್ ಜೊತೆ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಜ್ವಾಲಾಮುಖಿಯ ಕಂಪನ : ಸಸಿಕಾಂತ್ ಸೆಂಥಿಲ್‌ರವರ ಮೊದಲ ಬರಹ…

41 ವರ್ಷದ ಮಾಜಿ ಐಎಎಸ್ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ (ಟಿಎನ್‌ಸಿಸಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನ ಎಐಸಿಸಿ ಉಸ್ತುವಾರಿ ಮತ್ತು ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಸೆಂಥಿಲ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರಿ ಸೆಂಥಿಲ್ 2009ರ ಬ್ಯಾಚ್​​ನ ಕರ್ನಾಟಕ ಕೇಡರ್​ ಐಎಎಸ್​ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ದಕ್ಷತೆ ಮತ್ತು ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳನ್ನ ಅವರು ವಿರೋಧಿಸಿದ್ದರು.

ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೆಂಥಿಲ್ ಟೀಕಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆ, ಅಭಿಯಾನಗಳಲ್ಲಿ ಭಾಗಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಅವರ ಕಿರಿಯ ಸಹೋದ್ಯೋಗಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರುವ ಮೂಲಕ ತಮಿಳುನಾಡಿನಲ್ಲಿ ರಾಜಕೀಯ ಧುಮುಕಿದ್ದಾರೆ. ಪ್ರಸ್ತುತ ಅಣ್ಣಾಮಲೈ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.


ಇದನ್ನೂ ಓದಿ: ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...