Homeಮುಖಪುಟಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

- Advertisement -
- Advertisement -

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

79 ವರ್ಷದ ಉಮ್ಮನ್ ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4:25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ತನ್ನ ನೇತೃತ್ವದಲ್ಲಿ ನಾನಾ ರಾಜ್ಯಗಳಲ್ಲಿರುವ ವಿಪಕ್ಷಗಳ ಬೃಹತ್ ಸಭೆ ಆಯೋಜಿಸಿರುವ ದಿನವೇ (ಜು. 18), ತನ್ನ ನಾಯಕರೊಬ್ಬರನ್ನು ಕಳೆದುಕೊಂಡಿರುವುದು ವಿಪರ್ಯಾಸ.

1943ರ ಕೇರಳದ ಕೊಟ್ಟಾಯಂ ಜಿಲ್ಲೆಯ ಪುದುಪಲ್ಲಿ ಎಂಬಲ್ಲಿ ಜನಿಸಿದ್ದ ಚಾಂಡಿ, ವಿದ್ಯಾರ್ಥಿಯಾಗಿದ್ದಾಗಿನಿಂದಲೇ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಅಖಿಲ ಭಾರದ ಕಾಂಗ್ರೆಸ್‌ನ ವಿದ್ಯಾರ್ಥಿಗಳ ವಿಭಾಗವಾದ ಕೇರಳ ಸ್ಟೂಡೆಂಟ್ಸ್ ಯೂನಿಯನ್ ನ (ಕೆಎಸ್ ಯು) ಸದಸ್ಯರಾಗಿ, ಅನೇಕ ಹೋರಾಟಗಳಲ್ಲಿ ಅವರು ಗುರುತಿಸಿಕೊಂಡಿದ್ದರು. ಕಲಾ ವಿಭಾಗದಲ್ಲಿ ಪದವಿಯನ್ನು ಪಡೆದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡರು.

ಉಮ್ಮನ್ ಚಾಂಡಿ 1969ರಲ್ಲಿ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾದರು. ಬಳಿಕ 1970 ರಲ್ಲಿ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2021ರಲ್ಲಿ ನಡೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ಅದೇ ಕ್ಷೇತ್ರದಿಂದ ಜಯ ಗಳಿಸಿದ್ದರು. 2004ರಿಂದ 2006ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದ್ದರು. ಆನಂತರ, 2011ರಿಂದ 2016ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಅವರು ಸೇವೆ ಸಲ್ಲಿಸುವ ಅವಕಾಶ ಒದಗಿಬಂದಿತ್ತು.

ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಅವರು ಟ್ವಿಟರ್ ನಲ್ಲಿ ಚಾಂಡಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಅವರು ಒಬ್ಬ ಧೀಮಂತ ನಾಯಕರೊಬ್ಬರನ್ನು ಕಾಂಗ್ರೆಸ್ ಇಂದು ಕಳೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...