Homeಕರ್ನಾಟಕಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

ಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

- Advertisement -
- Advertisement -

ಕೇರಳದಲ್ಲಿ ನಿಫಾ ಮತ್ತು ಕೊರೊನಾ ಎರಗಿದಾಗ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಾಜಿ ಆರೋಗ್ಯ ಸಚಿವೆ ‘ಕೆ.ಕೆ. ಶೈಲಜಾ ಟೀಚರ್‌’ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಸಿಪಿಐಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವೆಂಬರ್‌ 23 ರ ಮಂಗಳವಾರ ಜಿಲ್ಲೆಯ ಗುರುಪುರ ಕೈಕಂಬದಲ್ಲಿ ನಡೆಯಲಿದೆ.

ಅಂದು ನಡೆಯಲಿರುವ ಬಹಿರಂಗ ಸಭೆಯಲ್ಲಿ ಶೈಲಜಾ ಟೀಚರ್‌ ಅವರು ಪ್ರಮುಖ ಭಾಷಣಕಾರರಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ನಗರ ಸಿಪಿಐಎಂ ಕಾರ್ಯದರ್ಶಿ ಸುನಿಲ್ ಕುಮಾರ್‌ ಬಜಾಲ್, “ಜಿಲ್ಲಾ ಸಮ್ಮೇಳನದ ಅಂಗವಾಗಿ ನಡೆಯಲಿರುವ ಬಹಿರಂಗ ಸಭೆಗೆ ಅವರು ಆಗಮಿಸಲಿದ್ದಾರೆ. ಅಂದು ಶ್ರಮಿಕರು, ಕಾರ್ಮಿಕರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಬೆಂಬಲಿಗರು ಸೇರಿದಂತೆ ಸುಮಾರು 10 ಸಾವಿರ ಜನರು ಭಾಗವಹಿಸಲಿದ್ದು, ವರ್ಣರಂಜಿತ ರ್‍ಯಾಲಿ ನಡೆಯಲಿದೆ. ಅವರನ್ನು ಉದ್ದೇಶಿಸಿ ಶೈಲಜಾ ಟೀಚರ್‌ ಭಾಷಣ ಮಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ಕೇರಳದಲ್ಲಿ ನಿಫಾ ಸಾಂಕ್ರಮಿಕವನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಶೈಲಜಾ ಟೀಚರ್‌, ಕೊರೊನಾ ಸಮಯದಲ್ಲೂ ವಿಶ್ವದ ಗಮನ ಸೆಳೆದಿದ್ದರು.

ಅಮೇರಿಕನ್ ಅಸೋಸಿಯೇಷನ್ ​​ಫಾರ್ ದಿ ಅಡ್ವಾನ್ಸ್‌ಮೆಂಟ್ ಆಫ್ ಸೈನ್ಸ್ (ಎಎಎಎಸ್) ನ ವಿಜ್ಞಾನ ನಿಯತಕಾಲಿಕೆಯು, ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರನ್ನು “ಭಾರತದ ಕೋವಿಡ್ ಟೀಚರ್” ಎಂದು ಬಣ್ಣಿಸಿತ್ತು. ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಸಮರ್ಪಕವಾಗಿ ನಿಭಾಯಿಸಿದ್ದಕ್ಕೆ ಶೈಲಜಾ ಅವರನ್ನು ವಿಶ್ವಸಂಸ್ಥೆಯು ‘ಸಾರ್ವಜನಿಕ ಸೇವಾ ದಿನಾಚರಣೆ’ಯಲ್ಲಿ ಭಾಷಣಕ್ಕಾಗಿ ಆಹ್ವಾನಿಸಿ ಗೌರವಿಸಿತ್ತು. ಅಲ್ಲದೆ ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ವಿಶ್ವವಿದ್ಯಾಲಯ (CEU) ನೀಡುವ ಓಪನ್ ಸೊಸೈಟಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....