Homeಕರ್ನಾಟಕರೈತ ಮುಖಂಡ ಟಿ.ನುಲೇನೂರು ಎಂ.ಶಂಕರಪ್ಪ ನಿಧನ

ರೈತ ಮುಖಂಡ ಟಿ.ನುಲೇನೂರು ಎಂ.ಶಂಕರಪ್ಪ ನಿಧನ

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯ ರೈತ ಮುಖಂಡ, ಸಾಮಾಜಿಕ ಹೋರಾಟಗಾರ ಟಿ.ನುಲೇನೂರು ಎಂ.ಶಂಕರಪ್ಪ ಅವರು  ನಿಧನರಾಗಿದ್ದಾರೆ.

68 ವರ್ಷ ವಯಸ್ಸಿನ ಟಿ.ನುಲೇನೂರು ಎಂ.ಶಂಕರಪ್ಪ, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.  ಅವರನ್ನು ಸೋಮವಾರ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಎಂ.ಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ  ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಗ್ರಾಮ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರಿನಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಂ.ಶಂಕ್ರಪ್ಪ ಅವರು ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಅಧ್ಯಕ್ಷರಾಗಿ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಈ ಮೊದಲು ಅವರು ರೈತ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ರೈತರ ಪರವಾಗಿ ಜಿಲ್ಲೆಯಲ್ಲಿ ಗಟ್ಟಿ ಧ್ವನಿಯಾಗಿದ್ದ ಶಂಕರಪ್ಪಅವರು ಭದ್ರಾ ಮೇಲ್ದಂಡೆ ಹೋರಾಟದ ಅನುಷ್ಟಾನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅತೀವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ರೈತರಿಗೆ ಬರ ಪರಿಹಾರ ಸೇರಿದಂತೆ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇದಲ್ಲದೆ ಕಳೆದ 20 ವರ್ಷಗಳಿಂದ ಚಿತ್ರದುರ್ಗ ನಗರದಲ್ಲಿ ಪತ್ರಿಕಾ ವಿತರಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...