ಯುಪಿಎ ಸರ್ಕಾರದ ಮಾಜಿ ಸಚಿವ ಆರ್‌ಪಿಎನ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇದಾಗಿ ಕೆಲವೇ ಗಂಟೆಗಳ ನಂತರ ದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್, ಪಕ್ಷದ ಮಾಜಿ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಇವರ ರಾಜೀನಾಮೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, “ಹೇಡಿಗಳು ಈ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಸೇರುವುದಕ್ಕೂ ಕೆಲವೇ ನಿಮಿಷಗಳ ಮೊದಲು, ಆರ್‌ಪಿಎನ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು, “ಇದು ನನಗೆ ಹೊಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಎದುರು ನೋಡುತ್ತಿದ್ದೇನೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ: ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
#WATCH Former Union minister & Congress leader RPN Singh joins Bharatiya Janata Party in Delhi, ahead of Uttar Pradesh Assembly elections pic.twitter.com/HTGrFoNHDK
— ANI (@ANI) January 25, 2022
ಆರ್‌ಪಿಎನ್ ಸಿಂಗ್ ಅವರು ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು. “ಕಾಂಗ್ರೆಸ್ ಪಕ್ಷ ಹೋರಾಡುತ್ತಿರುವ ಈ ಯುದ್ಧವು, ಶೌರ್ಯದಿಂದ ಮಾತ್ರ ಎದುರಿಸಬಹುದು… ಅದಕ್ಕೆ ಧೈರ್ಯ, ಶಕ್ತಿ ಬೇಕು. ಅದನ್ನು ಎದುರಿಸಲು ಹೇಡಿಗಳಿಗೆ ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕ ಗಾಂಧಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.
— RPN Singh (@SinghRPN) January 25, 2022
ಇದನ್ನೂ ಓದಿ:ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬರೆದ ಪತ್ರದಲ್ಲಿ, ರಾಷ್ಟ್ರ ಮತ್ತು ರಾಷ್ಟ್ರದ ಜನರ ಸೇವೆ ಮಾಡಲು ಅವಕಾಶವನ್ನು ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. 15 ನೇ ಲೋಕಸಭೆಯಲ್ಲಿ ಕುಶಿನಗರ ಕ್ಷೇತ್ರದ ಸಂಸದರಾಗಿದ್ದ ಆರ್‌ಪಿಎನ್ ಸಿಂಗ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
“ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತೇನೆ. ರಾಷ್ಟ್ರ ಮತ್ತು ರಾಷ್ಟ್ರದ ಜನರ ಸೇವೆ ಸಲ್ಲಿಸಲು ನನಗೆ ಅವಕಾಶವನ್ನು ಒದಗಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದಗಳು” ಎಂದು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಪತ್ರದ ನಂತರ ಅವರು ತಮ್ಮ ರಾಜಕೀಯ ಪಯಣದಲ್ಲಿ ‘ಹೊಸ ಅಧ್ಯಾಯ’ವನ್ನು ಪ್ರಾರಂಭಿಸಲಿದ್ದೇನೆ ಎಂದು ದೃಢಪಡಿಸಿದ್ದರು. “ಇಡೀ ರಾಷ್ಟ್ರ ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ನಾನು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ. ಜೈ ಹಿಂದ್” ಎಂದು ಸಿಂಗ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌ಗೆ ಸೇರ್ಪಡೆ


