Homeಕರ್ನಾಟಕಮಾಜಿ ಶಾಸಕ ಮಂಡ್ಯದ ಎಚ್.ಡಿ. ಚೌಡಯ್ಯ ನಿಧನ

ಮಾಜಿ ಶಾಸಕ ಮಂಡ್ಯದ ಎಚ್.ಡಿ. ಚೌಡಯ್ಯ ನಿಧನ

- Advertisement -
- Advertisement -

ಜನಪರ ನಾಯಕ, ಸ್ವಾಭಿಮಾನಿ ರಾಜಕಾರಣಿ ಎಂದೇ ಪ್ರಸಿದ್ಧಿ ಪಡೆದಿದ್ದ ಮಾಜಿ ಶಾಸಕ ಎಚ್.ಡಿ.ಚೌಡಯ್ಯ (94) ಅವರು ಮಂಗಳವಾರ ರಾತ್ರಿ ಮಂಡ್ಯದ ಹೊಳಲು ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ರೈತ ಕುಟುಂಬದಲ್ಲಿ ಜನಿಸಿದ್ದ ಚೌಡಯ್ಯ ಅವರು, ಕೃಷಿ ಪದವಿ (ಬಿಎಸ್ಸಿ ಅಗ್ರಿ) ಪಡೆದಿದ್ದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು, ತಾಲೂಕು ಬೋರ್ಡ್‌ ಅಧ್ಯಕ್ಷರಾಗಿದ್ದರು. ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಹೀಗೆ ಅನೇಕ ಹೋರಾಟಗಳ ಮೂಲಕ ರಾಜಕೀಯ ಪ್ರವೇಶಿಸಿದರು. 1978ರಲ್ಲಿ ಪ್ರಥಮ ಬಾರಿಗೆ ಕೆರಗೋಡು ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ನಂತರ ನಾಲ್ಕು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಸತ್ಯ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಸಮಕಾಲೀನರು ಅವರನ್ನು ನೆನಪಿಸಿಕೊಳ್ಳುತ್ತಾರೆ. ಜನಪರ ಆಲೋಚನೆಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದರು.

ಪಿಇಟಿ ಶಿಕ್ಷಣ ಸಂಸ್ಥೆ ಹುಟ್ಟುಹಾಕಿದ್ದರು. ಪಿಐಎಸ್ ಟ್ರಸ್ಟ್‌ ನ ಮಾಜಿ ಅಧ್ಯಕ್ಷ, ಹಿರಿಯ ಸಹಕಾರಿ ಧುರೀಣರಾದ್ದರು. ಪಿಐಎಸ್ ಟ್ರಸ್ಟ್‌ನ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಚೌಡಯ್ಯ ಬಳಲುತ್ತಿದ್ದರು. ಇವರ ಅಗಲಿಕೆಗೆ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

“ಆತ್ಮೀಯರು, ಹಿತೈಷಿಯಾಗಿದ್ದ ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಖಃಕರ ಸಂಗತಿ. ಪತ್ನಿಯ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಆರೋಗ್ಯ ಸಮಸ್ಯೆಗಳಿದ್ದವು. ಶತಾಯುಶಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು, “ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರ ಎಚ್.ಡಿ. ಚೌಡಯ್ಯ ಅವರ ನಿಧನದಿಂದ ನನಗೆ ಬಹಳ ನೋವಾಗಿದೆ. ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆ ಸಲ್ಲಿಸಿದ್ದರು” ಎಂದು ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿರಿ: ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...