Homeಕರ್ನಾಟಕಮಾಜಿ ಶಾಸಕ ಮೊಹಿಯುದ್ದೀನ್ ಬಾವಾರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ!

ಮಾಜಿ ಶಾಸಕ ಮೊಹಿಯುದ್ದೀನ್ ಬಾವಾರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ!

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಮತ್ತು ಜೆಡಿಎಸ್‌ ನಾಯಕ ಬಿಎಂ ಫಾರೂಕ್ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಪೊಲೀಸರು ಭಾನುವಾರ ಮುಂಜಾನೆ ಕುಳೂರು ಸೇತುವೆ ಬಳಿ ಅವರ ವಾಹನವನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉದ್ಯಮಿಯಾಗಿರುವ ಮುಮ್ತಾಜ್ ಅಲಿ ಅವರು ಬೆಳಿಗ್ಗೆ 3 ಗಂಟೆಗೆ ಮನೆಯಿಂದ ಕಾರಿನೊಂದಿಗೆ ಹೊರಟು ನಗರದಾದ್ಯಂತ ಸುತ್ತಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನದಿಗೆ ಹಾರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರಾಜ್ಯ ವಿಪತ್ತು ಪರಿಹಾರ ಪಡೆ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಶೋಧ ನಡೆಸುತ್ತಿವೆ.

ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ

ಸೇತುವೆ ಬಳಿ ಕಾರನ್ನು ನಿಲ್ಲಿಸುವ ಮುನ್ನ ಬಸ್‌ಗೂ ಡಿಕ್ಕಿ ಹೊಡೆದಿದ್ದರು ಎಂದು ವರದಿಯಾಗಿದೆ. ಹಾಗಾಗಿ ಅವರ ಕಾರು ಕೂಡಾ ಜಖಂಗೊಂಡಿದೆ. ಮುಮ್ತಾಜ್ ಪತ್ತೆಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸಹಾಯವನ್ನೂ ಕೋರಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮನೆಯಲ್ಲಿ ಜಗಳವಾಗಿದ್ದು, ನಂತರ ಅವರು ಮನೆಯಿಂದ ಹೊರಟುಹೋಗಿದ್ದರು. ಮಗಳಿಗೆ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಹೇಳಿದ್ದರು. ಅವರು ಕಾರನ್ನು ನಿಲ್ಲಿಸಿ ಸ್ಥಳದಿಂದ ತೆರಳಿದ್ದಾರೊ ಅಥವಾ ನದಿಗೆ ಹಾರಿದ್ದಾರೊ ಎಂಬುದು ನಮಗೆ ತಿಳಿಯಬೇಕಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಮಂಗಳೂರಿನ ಕೂಲೂರು ಸೇತುವೆ ಬಳಿ ಕಾರು ಪತ್ತೆಯಾಗುತ್ತಿದ್ದರಂತೆ ಸ್ಥಳದಲ್ಲಿ ಜನರು ಜಮಾ ಅಗಿದ್ದು, ಡಿಸಿಪಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...