Homeಕರ್ನಾಟಕಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಮತ್ತೆ ಬಿಜೆಪಿಗೆ!

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಮತ್ತೆ ಬಿಜೆಪಿಗೆ!

- Advertisement -
- Advertisement -

ಬಿಜೆಪಿಯಿಂದ ಮುನಿಸಿಕೊಂಡು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಭಾನುವಾರದಂದು ಬಸವಕಲ್ಯಾಣದಲ್ಲಿ ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಅಘಾತ ನೀಡಿದ್ದಾರೆ.

ಪ್ರಕಾಶ್ ಖಂಡ್ರೆ ಅವರು ಬಾಲ್ಕಿ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಬಿಜೆಪಿಯೊಂದಿಗೆ ಮುನಿಸಿಕೊಂಡು ಜೆಡಿಎಸ್ ಸೇರಿಕೊಂಡಿದ್ದರು. ರಾಜ್ಯದಲ್ಲಿ ಉಪಚುನಾವಣೆ ಹೊತ್ತಿಗೆ ಮತ್ತೇ ಅವರು ಬಿಜೆಪಿ ಸೇರಿದ್ದು ಬಿಜೆಪಿ ಹೆಚ್ಚಿನ ಬಲನೀಡಿದಂತಾಗಿದೆ.

ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌‌…

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜು ಬೊಮ್ಮಾಯಿ, ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವರಾದ ಶ್ರೀ ವಿ ಸೋಮಣ್ಣ ಉಪಸ್ಥಿತರಿದ್ದರು.

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣರಾವ್ ಅವರು ಮೃಪಟ್ಟಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ. ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಸಯ್ಯದ್ ಯಾಸ್ರಾಬ್ ಅಲಿ ಖಾದ್ರಿ ಅವರಿಗೆ ಟಿಕೆಟ್ ನೀಡಿತ್ತು. ಕಾಂಗ್ರೆಸ್ ಅಲ್ಲಿ ನಾರಾಯಣರಾವ್ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಿದ್ದು, ಬಿಜೆಪಿ ತನ್ನ ಅಭ್ಯರ್ಥಿಯಾಗಿ ಶರಣು ಸಲಗಾರ್ ಅವರಿಗೆ ಬಿ ಪಾರಂ ನೀಡಿದೆ.

ಇಲ್ಲಿ ಎಪ್ರಿಲ್ 17 ಕ್ಕೆ ಚುನಾವಣೆ ನಡೆಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಿಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...