Homeಮುಖಪುಟಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಉದ್ಯಮಿ ಶ್ರೀನಿವಾಸ್ ಭಟ್‌

- Advertisement -
- Advertisement -

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, “ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್ಆರ್ ಟಿಸಿ ಚೇರ್ಮನ್ ಆಗಿದ್ದರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದು ವಿವರಿಸಿದರು.

“ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ” ಎಂದರು.

“ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗಧಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ಡಿ.30 ರಂದು ಬಿಜಾಪುರದಲ್ಲಿ ಕೃಷ್ಣಾ ನದಿ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಜ.2 ರಂದು ಮಹದಾಯಿ ವಿಚಾರದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಸರ್ಕಾರ ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಜ.8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನು ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು” ಎಂದು ಹೇಳಿದರು.

“ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಾಡುತ್ತಾರೆ. ನಾನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...