Homeಕರ್ನಾಟಕಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

- Advertisement -
- Advertisement -

ದೇಶದ ಪ್ರಧಾನಿಯಾಗಿ ನಾಡಿನ ಗಮನ ಸೆಳೆದವರು ಎಚ್.ಡಿ.ದೇವೇಗೌಡರು. ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಮಕ್ಕಳಿಗೆ ಈ ವಿಶೇಷತೆಯನ್ನು ತಿಳಿಸುವ ನಿಟ್ಟಿನಲ್ಲಿ ಪಠ್ಯ ರೂಪಿಸಿತ್ತು. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಯನ್ನು ತೆಗೆದುಹಾಕುವ ಭರದಲ್ಲಿ ದೇವೇಗೌಡರ ಮಾಹಿತಿಯನ್ನೂ ತೆಗೆದುಹಾಕಿದೆ.

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಈ ಪಠ್ಯದಲ್ಲಿ ಕತ್ತರಿಯಾಡಿಸಿರುವ ಚಕ್ರತೀರ್ಥ ಸಮಿತಿಗೆ ಹಲವು ಸಂಗತಿಗಳು ಅಪ್ರಸ್ತುತವೆನಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠವನ್ನು ‘ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ’ ಎಂದು ಪರಿಷ್ಕರಣೆ ಮಾಡಿರುವ ನೂತನ ಸಮಿತಿಯು ವಿವಿಧ ಜಿಲ್ಲೆಗಳ ಮಾಹಿತಿಗೆ ಕತ್ತರಿಹಾಕಿದೆ.

“ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಲಬುರಗಿ ವಿಭಾಗ, ಬೆಳಗಾವಿ ವಿಭಾಗ” ಎಂದು ವಿಭಾಗಿಸಿ, ಒಂದೊಂದು ವಿಭಾಗದ ಅಡಿಯಲ್ಲಿರುವ ಜಿಲ್ಲೆಗಳ ಪರಿಚಯವನ್ನು ಮಾಡಿಕೊಡಲಾಗಿತ್ತು. ಚಕ್ರತೀರ್ಥ ಸಮಿತಿಯು ಈ ವಿಭಾಗಗಳನ್ನು ಉಳಿಸಿದ್ದರೂ ಜಿಲ್ಲೆಗಳ ಮಾಹಿತಿಯನ್ನು ಕೈಬಿಟ್ಟಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಪರಿಚಯ ಮಾಡಿಕೊಡಲಾಗಿತ್ತು. ಇನ್ನುಳಿದ ಜಿಲ್ಲೆಗಳ ಪರಿಚಯವನ್ನು ಸಮಾಜವಿಜ್ಞಾನ ಭಾಗ-2ರ ಪಠ್ಯದಲ್ಲಿ ಮುಂದುವರಿಸಲಾಗಿತ್ತು.

(ಭಾಗ-2ರಲ್ಲಿ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ- ಜಿಲ್ಲೆಗಳ ಪರಿಚಯ ಮಾಡಿಕೊಡಲಾಗಿದೆ.)

ಮೈಸೂರು ವಿಭಾಗದಲ್ಲಿತ್ತು ಹಾಸನ ಜಿಲ್ಲೆಯ ಪರಿಚಯ ದೇವೇಗೌಡ ಫೋಟೋ

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿದೆ.

‘ಶಿವಮೊಗ್ಗ’ ಜಿಲ್ಲೆಯ ಪರಿಚಯದಲ್ಲಿತ್ತು ಕವಿಮನೆಯ ಚಿತ್ರ

ಶಿವಮೊಗ್ಗ ಜಿಲ್ಲೆಯ ಪರಿಚಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ರಾಷ್ಟ್ರಕವಿ ಕುವೆಂಪು ಅವರ ಕುರಿತ್ತಷ್ಟೇ ಅಲ್ಲದೇ ಕುಪ್ಪಳಿಯಲ್ಲಿರುವ ‘ಕವಿ ಮನೆ’ಯ ಭಾವಚಿತ್ರವನ್ನು ನೀಡಲಾಗಿತ್ತು.

ಇದನ್ನೂ ಓದಿರಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ವಿನಯ್‌ ಬಿದರೆ ಸಮರ್ಥನೆ

“ಜ್ಞಾನಪೀಠ ಪ್ರಶಸ್ತಿ ಪಡೆದ ಇಬ್ಬರು  ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಯು.ಆರ್‌.ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿಗೆ ಸೇರಿದವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಾಡುಗಾರ ಶಿವಮೊಗ್ಗ ಸುಬ್ಬಣ್ಣನವರು ಈ ಜಿಲ್ಲೆಯವರು” ಎಂಬ ಮಾಹಿತಿ ಇತ್ತು.

ಸರ್‌. ಎಂ.ವಿ. ಫೋಟೋ ಎರಡು ಕಡೆ ಬಳಕೆ

ಒಂದೇ ಪಠ್ಯ ಪುಸ್ತಕದಲ್ಲಿ ಎರಡು ಕಡೆ ಸರ್‌.ಎಂ.ವಿಶ್ವೇಶ್ವರಯ್ಯನವರ ಫೋಟೋವನ್ನು ಚಕ್ರತೀರ್ಥ ಸಮಿತಿ ಬಳಸಿದೆ. ಬರಗೂರರ ಸಮಿತಿ ರಚಿಸಿದ ‘ನಮ್ಮ ಕರ್ನಾಟಕ’ ಪಾಠದಲ್ಲಿ ಉದ್ದಿಮೆಗಳ ಕುರಿತು ತಿಳಿಸುವಾಗ ಸರ್‌.ಎಂ.ವಿ. ಅವರ ಫೋಟೋ ಬಳಸಲಾಗಿತ್ತು. ಮೈಸೂರು ವಿಭಾಗದ ಪಠ್ಯದಲ್ಲಿ ಟಿಪ್ಪು ಸುಲ್ತಾನ ಫೋಟೋವನ್ನು ನೀಡಲಾಗಿತ್ತು. ಆದರೆ ‘ಮೈಸೂರು ವಿಭಾಗ’ದ ಪಾಠವನ್ನು ಉಳಿಸಿಕೊಂಡಿರುವ ಸಮಿತಿಯು ಮೈಸೂರಿನ ಚಾರಿತ್ರಿಕ ಹಿನ್ನಲೆಯನ್ನು ಪರಿಚಯಿಸುವಾಗ ಟಿಪ್ಪು ಫೋಟೋ ಕೈಬಿಟ್ಟು ಮತ್ತೆ ಸರ್‌.ಎಂ.ವಿ.ಫೋಟೋ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇನ್ನೆಂತಾ ವಿಷ ತುಂಬಿಕೊಂಡಿರಬೇಕು ಈ ಬ್ರಾಹ್ಮಣ್ಯ ವನ್ನ ವೈಭವೀಕರಿಸುವ ಪಠ್ಯ ಪರಿಸ್ಕರಣೆ ಅಧ್ಯಕ್ಷ,ಸದಸ್ಯರು ಮತ್ತು ಸಚಿವ,ನಾಚಿಕೆಯಾಗಬೇಕು ಇವರಿಗೆ.

  2. ಎಷ್ಟೂಂದು ಅಸಹ್ಯದ ಫ್ಯಾಶಿಸ್ಟ್ ಮನಸ್ಥಿತಿಯವರು ಈ ಸವರ್ಣ ಮನಸ್ಥಿತಿಯವರು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...