Homeಮುಖಪುಟಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ: 30 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್‌ಗೆ ಜಾಮೀನು

- Advertisement -
- Advertisement -

1991ರಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎ.ಜಿ. ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

“ಅರ್ಜಿದಾರರು 30 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ ತೀವ್ರ ವಿರೋಧದ ನಡುವೆಯೂ ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹರು ಎಂದು ಪರಿಗಣಿಸಲಾಗಿದೆ. ಪೆರೋಲ್‌ನಲ್ಲಿ ಹೊರಬಂದಾಗ ಅವರ ವಿರುದ್ಧ ಯಾವುದೇ ದೂರು ಇಲ್ಲ” ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಎ.ಜಿ. ಪೆರಾರಿವಾಲನ್‌ಗೆ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ 2014 ರಲ್ಲಿ ಪರಿವರ್ತಿಸಲಾಗಿದೆ. ಅಪರಾಧಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಚೆನ್ನೈ ಬಳಿಯ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಸೂಚಿಸಿದೆ.

ಇದನ್ನೂ ಓದಿ: ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಮಲ್ಟಿ ಡಿಸಿಪ್ಲಿನರಿ ಮಾನಿಟರಿಂಗ್ ಏಜೆನ್ಸಿಯ (MDMA) ತನಿಖೆ ಪೂರ್ಣಗೊಳ್ಳುವವರೆಗೆ ತನ್ನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಪೆರಾರಿವಾಲನ್ (47) ಕೋರಿದ್ದರು. 2016 ರಲ್ಲಿ, ಅವರು ಶಿಕ್ಷೆಯನ್ನು ಬದಲಾಯಿಸುವಂತೆ ಕೋರಿ ತಮ್ಮ ಮನವಿಯನ್ನು ನಿರಾಕರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ನಡೆಯುತ್ತಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂನ (ಎಲ್‌ಟಿಟಿಇ) ಸದಸ್ಯೆ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯವರನ್ನು ಹತ್ಯೆಗೈದಿದ್ದರು. ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಧನು ಸೇರಿದಂತೆ ಹದಿನಾಲ್ಕು ಮಂದಿ ಸಾವನ್ನಪ್ಪಿದ್ದರು. ಗಾಂಧಿಯವರ ಹತ್ಯೆಯು ಭಾರತದ ಮೊದಲ ಆತ್ಮಹತ್ಯಾ ಬಾಂಬ್ ದಾಳಿ ಪ್ರಕರಣವಾಗಿದೆ.

ಪ್ರಕರಣದಲ್ಲಿ ಪೆರಾರಿವಾಲನ್, ಮುರುಗನ್, ಸಂತಮ್ ಮತ್ತು ನಳಿನಿ ಎಂಬ ನಾಲ್ವರು ಅಪರಾಧಿಗಳು ಶಿಕ್ಷೆ ಒಳಪಟ್ಟಿದ್ದರು. ಏಪ್ರಿಲ್ 2000 ರಲ್ಲಿ, ತಮಿಳುನಾಡು ರಾಜ್ಯಪಾಲರು ರಾಜ್ಯ ಸರ್ಕಾರದ ಶಿಫಾರಸು ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ ಮನವಿಯ ಆಧಾರದ ಮೇಲೆ ಅಪರಾಧಿ ನಳಿನಿಯ ಶಿಕ್ಷೆಯನ್ನು ಕಡಿಮೆಗೊಳಿಸಿದ್ದರು. ಫೆಬ್ರವರಿ 18, 2014 ರಂದು, ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತು.

ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪೆರಾರಿವಾಲನ್ ಅವರ ತಾಯಿ ಅರ್ಪುತಮ್ಮ ಅಮ್ಮಲ್ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ ಮತ್ತು ಗೋಪಾಲ್ ಶಂಕರನಾರಾಯಣನ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...