Homeಮುಖಪುಟಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ದುಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ದುಬೈನ ಅಮೆರಿಕನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಯಂಪ್ರೇರಿತ ದೇಶಭಷ್ಟರಾಗಿ ಹೊರಗುಳಿದಿದ್ದ ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ.

1999ರಲ್ಲಿ ರಕ್ತರಹಿತ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಸುಮಾರು ಒಂದು ದಶಕದ ಕಾಲ ಪಾಕಿಸ್ತಾನದಲ್ಲಿ ಮುಷರಫ್ ಆಡಳಿತ ನಡೆಸಿದರು.

ಅನೇಕ ವರ್ಷಗಳು ಅಧಿಕಾರದಲ್ಲಿದ್ದರು. ಅಲ್ ಖೈದಾ ಮತ್ತು ಇತರ ಉಗ್ರಗಾಮಿ ಇಸ್ಲಾಮಿಸ್ಟ್‌ಗಳು ಅವರನ್ನು ಕನಿಷ್ಠ ಮೂರು ಬಾರಿ ಕೊಲ್ಲಲು ಪತ್ನಿಸಿದ್ದರು.

ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ತೀವ್ರ ಮಿಲಿಟರಿ ಪ್ರಯೋಗವನ್ನು ಮಾಡಿದರು. ಅಲ್ ಖೈದಾ ಮತ್ತು ಅಫ್ಘಾನ್ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮಧ್ಯಪ್ರವೇಶಿಸಿದ್ದರಿಂದ ಮುಷರಫ್ ಆಡಳಿತ ಅವನತಿ ಹೊಂದಿತು.

1943ರಲ್ಲಿ ನವದೆಹಲಿಯಲ್ಲಿ ಜನಿಸಿದವರು ಮುಷರಫ್‌. ಅವರ ಕುಟುಂಬವು 1947ರಲ್ಲಿ ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡಾಗ ಅವರಿಗೆ ಕೇವಲ 4 ವರ್ಷ ವಯಸ್ಸಾಗಿತ್ತು. ತಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದರು, ಅವರ ತಾಯಿ ಶಿಕ್ಷಕಿಯಾಗಿದ್ದರು.

18ನೇ ವಯಸ್ಸಿನಲ್ಲಿ ಮುಷರಫ್‌ ಸೈನ್ಯಕ್ಕೆ ಸೇರಿದರು. ಅದರ ಮುಖ್ಯಸ್ಥರಾಗುವ ಮೊದಲು ಕಮಾಂಡೋ ಘಟಕವನ್ನು ಮುನ್ನಡೆಸಿದರು. ಭಾರತದ ಹಿಡಿತದಲ್ಲಿರುವ ಕಾಶ್ಮೀರದ ಪ್ರದೇಶಗಳನ್ನು ಆಕ್ರಮಿಸುವ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದಕ್ಕಾಗಿ ಅವರನ್ನು ವಜಾಗೊಳಿಸಲು ಪ್ರಯತ್ನಿಸಿದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಗೊಳಿಸುವ ಮೂಲಕ ಮುಷರಫ್‌ ಅಧಿಕಾರವನ್ನು ಪಡೆದಿದ್ದರು.

ಮುಷರಫ್ ಅವರ ಅಧಿಕಾರವಧಿಯಲ್ಲಿ ವಿದೇಶಿ ಹೂಡಿಕೆಯು ಪ್ರವರ್ಧಮಾನಕ್ಕೆ ಬಂದಿತು. ಪಾಕಿಸ್ತಾನವು 7.5%ರಷ್ಟು ವಾರ್ಷಿಕ ಆರ್ಥಿಕ ಬೆಳವಣಿಗೆಯನ್ನು ಕಂಡಿತು. ಇದು ವಿಶ್ವ ಬ್ಯಾಂಕ್ ಮಾಹಿತಿಯ ಪ್ರಕಾರ ಸುಮಾರು ಮೂರು ದಶಕಗಳಲ್ಲಿ ಅತ್ಯಧಿಕ ಮಟ್ಟದ್ದಾಗಿ ಗುರುತಿಸಿಕೊಂಡಿದೆ.

ಅವರ ಅಧ್ಯಕ್ಷೀಯ ಅವಧಿಯ ಬಳಿಕ ನಿರಂಕುಶ ಆಡಳಿತ ಹೆಚ್ಚಿತು. 2006ರಲ್ಲಿ, ಬಲೂಚಿಸ್ತಾನ್ ಪ್ರಾಂತ್ಯದ ಬುಡಕಟ್ಟು ಮುಖ್ಯಸ್ಥನನ್ನು ಕೊಲ್ಲಲು ಮುಷರಫ್ ಮಿಲಿಟರಿ ಕ್ರಮಕ್ಕೆ ಆದೇಶಿಸಿದರು. ಇದು ಇಂದಿಗೂ ಶಸಸ್ತ್ರ ವಿಪ್ಲವಕ್ಕೆ ಕಾರಣವಾಗಿದೆ.

ನಂತರ 2007ರಲ್ಲಿ ಪ್ರತಿಪಕ್ಷದ ನಾಯಕಿ ಬೆನಜೀರ್ ಭುಟ್ಟೊ ಅವರನ್ನು ಹತ್ಯೆ ಮಾಡಿದ ಆತ್ಮಹತ್ಯಾ ದಾಳಿಯು ಹಿಂಸಾಚಾರವನ್ನು ಪ್ರಚೋದಿಸಿತು. ನ್ಯಾಯಾಂಗವನ್ನು ಬಲಪಡಿಸುವ ಪ್ರಯತ್ನಗಳು ಪ್ರತಿಭಟನೆಗಳಿಗೆ ಕಾರಣವಾಯಿತು. ಮುತ್ತಿಗೆ ಹಾಕಿದ ಮುಷರಫ್ ಚುನಾವಣೆಗಳನ್ನು ಮುಂದೂಡಿದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

2008ರಲ್ಲಿ 11 ವರ್ಷಗಳ ಬಳಿಕ ದೇಶದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಗಳು ನಡೆದವು. ಮುಷರಫ್ ಅವರ ಪಕ್ಷವು ಸೋತಿತು. ಸಂಸತ್ತಿನ ದೋಷಾರೋಪಣೆಯನ್ನು ಎದುರಿಸಿತು. ಮುಷರಫ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲಂಡನ್‌ಗೆ ಪಲಾಯನ ಮಾಡಿದರು.

ಸಂಸತ್ತಿಗೆ ಸ್ಪರ್ಧಿಸಲು ಅವರು 2013 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. ಆದರೆ ತಕ್ಷಣವೇ ಅನರ್ಹಗೊಳಿಸಲಾಯಿತು. 2016ರಲ್ಲಿ ದುಬೈಗೆ ತೆರಳಲು ಅವಕಾಶ ನೀಡಲಾಗಿತ್ತು.

2007ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ನ್ಯಾಯಾಲಯವು 2019ರಲ್ಲಿ ಮುಷರಫ್‌ಗೆ ಮರಣದಂಡನೆ ವಿಧಿಸಿತು. ಆದರೆ ತೀರ್ಪನ್ನು ನಂತರ ರದ್ದುಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...