HomeಮುಖಪುಟPranab Mukherjee passes away | ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

Pranab Mukherjee passes away | ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

2012 ರಿಂದ 2017 ರವರೆಗೆ ಭಾರತದ 13 ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆಯನ್ನು ಅವರು ಅಲಂಕರಿಸಿದ್ದರು.

- Advertisement -
- Advertisement -

ತೀವ್ರ ಆರೋಗ್ಯ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

20 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉಲ್ಭಣಗೊಂಡಿತ್ತು. ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ಮಾಡ ಬೇಕಿದ್ದ ಕಾರಣ ಅದಕ್ಕೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದ ಕಾರಣ ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ: 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಇದರ ನಂತರ ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ಅವರ ಮೇಲೆ ನಿಗಾ ವಹಿಸಲಾಗಿತ್ತು.

1935, ಡಿಸೆಂಬರ್ 11 ರಂದು ಬಂಗಾಳದಲ್ಲಿ ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012 ರಿಂದ 2017 ರವರೆಗೆ ಭಾರತದ 13 ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆಯನ್ನು ಅವರು ಅಲಂಕರಿಸಿದ್ದಾರೆ.

ರಾಷ್ಟ್ರಪತಿ ಹುದ್ದೆಗೂ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.


ಓದಿ: ಆಪರೇಷನ್‌ ‘ಬ್ಲೂ ಸ್ಟಾರ್‌’ ಮತ್ತು ಇಂದಿರಾ ಗಾಂಧಿ ಹತ್ಯೆಗೆ ಕಾರಣಗಳೇನು? ಹೇಗೆ ನಡೆಯಿತು.. ಪ್ರತ್ಯಕ್ಷದರ್ಶಿಯ ವರದಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...