Homeಕರೋನಾ ತಲ್ಲಣಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಸೋಂಕು: ಬೇಗ ಗುಣಮುಖರಾಗಿ ಎಂದ ಗಣ್ಯರು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಸೋಂಕು: ಬೇಗ ಗುಣಮುಖರಾಗಿ ಎಂದ ಗಣ್ಯರು

- Advertisement -
- Advertisement -

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.‌ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ದೇವೇಗೌಡರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ದೇವೇಗೌಡರು, “ನಾನು ಮತ್ತು ನನ್ನ ಪತ್ನಿ ಚೆನ್ನಮ್ಮ ಕೊರೊನಾ ಸೋಂಕಿಗೆ ಒಳಗಾಗಿದ್ದೇವೆ. ನಾವೆಲ್ಲರು ಐಸೋಲೇಷನ್‌ಗೆ ಒಳಗಾಗಿದ್ದೇವೆ. ಪಕ್ಷದ ಕಾರ್ಯಕರ್ತರು ಯಾರು ಆತಂಕಕ್ಕೆ ಒಳಗಾಗಬೇಡಿ.‌ ಇತ್ತಿಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ದೇವೇಗೌಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಇಬ್ಬರು ನಾಯಕರು ಟ್ವೀಟ್ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತನಾಡಿದ್ದೇನೆ. ಇಬ್ಬರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಪಕ್ಷಾತೀತವಾಗಿ ದೇವೇಗೌಡ ದಂಪತಿ ಆರೋಗ್ಯ ಸುಧಾರಣೆಗೆ ಹಾರೈಸಿದ್ದಾರೆ.

’ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

’ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಇಬ್ಬರೂ ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್ ಮಾಡಿ, ’ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ಹಲವು ಮುಖಂಡರು ಮಾಜಿ ಪ್ರಧಾನಿ ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ಆರೋಗ್ಯ ಸುಧಾರಣೆಗೆ ಹಾರೈಸಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

0
ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ...