HomeಮುಖಪುಟManmohan Singh | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲು

Manmohan Singh | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರು ಕೆಳೆದ ಎಪ್ರಿಲ್‌ನ ಕೊರೊನಾ ಎರಡನೆ ಅಲೆಯ ಸಮಯದಲ್ಲಿ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ, ಚೇತರಿಸಿಕೊಂಡಿದ್ದರು.

ಎಐಸಿಸಿ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಪ್ರಣವ್ ಝಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾಮಾನ್ಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಆಧಾರರಹಿತ ವದಂತಿಗಳನ್ನು ಪ್ರಣವ್ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಸಲಹೆ; ಮನಮೋಹನ್ ಸಿಂಗ್‌ ಅವರನ್ನು ಟ್ರೋಲ್ ಮಾಡಿದ ಕೇಂದ್ರ ಸರ್ಕಾರ!

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಆಧಾರರಹಿತ ವದಂತಿ ಹರಿದಾಡುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅವರು ರೊಟೀನ್ ಚೆಕಪ್​​ಗೆ ಒಳಗಾಗುತ್ತಿದ್ದಾರೆ. ಅಗತ್ಯ ಬಂದರೆ ಹೆಚ್ಚಿನ ಮಾಹಿತಿಗಳನ್ನು ನಾವು ಹಂಚಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸುದ್ದಿ ಬರುತ್ತಿದ್ದಂತೆ, ಕಾಂಗ್ರೆಸ್‌ನ ಪ್ರಮುಖ ನಾಯಕರು ಟ್ವಿಟರ್‌ನಲ್ಲಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮನಮೋಹನ್ ಸಿಂಗ್ ಅವರ ಚೇತರಿಕೆಗಾಗಿ ಹಾರೈಸಿದ್ದಾರೆ.

“ಏಮ್ಸ್‌ಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ” ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೇನೆಯ ಹಿಂದಿನ ಕಾರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬರೆದ ವಿಶೇಷ ಲೇಖನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

0
ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ...