Homeಅಂತರಾಷ್ಟ್ರೀಯಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಲ್ಲಿ ಅರೆಸೈನಿಕ ಪಡೆಗಳ ರೇಂಜರ್‌ಗಳು ಮಂಗಳವಾರ ಬಂಧಿಸಿದ್ದಾರೆ ಎಂದು ಡಾನ್ ವರದಿ ಮಾಡಿದೆ.

ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್‌ನ ಅಧಿಕೃತ ವಕ್ತಾರ ಫವಾದ್ ಚೌಧರಿ,” ಮಾಜಿ ಪ್ರಧಾನಿಯನ್ನು ಕೋರ್ಟ್ ಆವರಣದಿಂದ ಅಪಹರಿಸಲಾಗಿದೆ. ಹಲವಾರು ವಕೀಲರು ಮತ್ತು ಸಾಮಾನ್ಯ ಜನರು ಚಿತ್ರಹಿಂಸೆಗೊಳಗಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಖಾನ್ ಅವರನ್ನು ಅಪರಿಚಿತ ಜನರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈ ಕುರಿತು ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಆಂತರಿಕ ಕಾರ್ಯದರ್ಶಿ ಮತ್ತು ಐಜಿ ಪೊಲೀಸರಿಗೆ 15 ನಿಮಿಷಗಳಲ್ಲಿ ಅವರು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶಿಸಿದ್ದಾರೆ” ಎಂದು ಚೌಧರಿ ಹೇಳಿದ್ದಾರೆ.

ಪಿಟಿಐ ಅಧ್ಯಕ್ಷ ಮತ್ತು ಅವರ ಪತ್ನಿ ಒಡೆತನದ ಅಲ್-ಖಾದಿರ್ ಟ್ರಸ್ಟ್‌ಗೆ ಬಹ್ರಿಯಾ ಟೌನ್ PKR 530 ಮಿಲಿಯನ್ ಮೌಲ್ಯದ ಭೂಮಿಯನ್ನು ಮಂಜೂರು ಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಇಸ್ಲಾಮಾಬಾದ್ ಪೊಲೀಸರನ್ನು ಉಲ್ಲೇಖಿಸಿ ಡಾನ್ ವರದಿ ಮಾಡಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಿಶ್ವಾಸಮತ ಯಾಚನೆಯ ಮೂಲಕ ಪದಚ್ಯುತಗೊಂಡಾಗಿನಿಂದ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ, ಅವರು ಭಯೋತ್ಪಾದನೆ, ಧರ್ಮನಿಂದನೆ, ಕೊಲೆ, ಹಿಂಸಾಚಾರ, ಹಿಂಸಾಚಾರಕ್ಕೆ ಪ್ರಚೋದನೆಗೆ ಸಂಬಂಧಿಸಿದ 140 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಆದರೆ ಈ ಎಲ್ಲ ಪ್ರಕರಣಗಳನ್ನು ಆಡಳಿತಾರೂಢ ಮೈತ್ರಿಕೂಟ ರಾಜಕೀಯ ದ್ವೇಷದ ಕಾರಣಕ್ಕೆ ಹೊರಿಸಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಕುರಿತು ಅಮಿತ್ ಷಾ ಹೇಳಿಕೆ; ಸುಪ್ರೀಂಕೋರ್ಟ್ ಗರಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...