Homeರಾಜಕೀಯಬಿಜೆಪಿ ಸೇರಲಿರುವ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ಬಿಜೆಪಿ ಸೇರಲಿರುವ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

- Advertisement -
- Advertisement -

ಪಂಜಾಬ್ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಅವರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ ವರದಿ ಮಾಡಿದೆ.

89 ವರ್ಷದ ಅಮರಿಂದರ್‌ ಸಿಂಗ್ ಅವರು ಸಧ್ಯಕ್ಕೆ ಬೆನ್ನು ಶಸ್ತ್ರಚಿಕಿತ್ಸೆಗಾಗಿ ಲಂಡನ್‌ನಲ್ಲಿದ್ದಾರೆ. ಮುಂದಿನ ವಾರ ಅವರು ಭಾರತಕ್ಕೆ ಹಿಂದಿರುಗಲಿದ್ದು, ನಂತರ ತಮ್ಮ ‘ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ’ವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಬೆನ್ನು ಶಸ್ತ್ರಚಿಕಿತ್ಸೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಮರಿಂದರ್ ಸಿಂಗ್ ಅವರೊಂದಿಗೆ ಭಾನುವಾರ ಮಾತನಾಡಲಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

ಅಮರಿಂದರ್ ಸಿಂಗ್ ಅವರು ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಜೊತೆಗೆ ಐದು ದಶಕ ಕೆಲಸ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೂ ರಾಜೀನಾಮೆ ನೀಡಿದ್ದರು. ಇದಾದ ನಂತರ ಪಂಜಾಬ್ ಚುನಾವಣೆ ವೇಳೆಗೆ ‘ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ’ ಎಂಬ ಪಕ್ಷವನ್ನು ಕಟ್ಟಿ ಚುನಾವಣೆ ಎದುರಿಸಿದ್ದರು.

ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಅವರು ಕಾಂಗ್ರೆಸ್ ತೊರೆದ ನಂತರ ತಾನು ಬಿಜೆಪಿಗೆ ಸೇರುವುದನ್ನು ನಿರಾಕರಿಸಿದ್ದರು. ಆದರೆ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಪಟಿಯಾಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಠೇವಣಿಯನ್ನೂ ಕಳೆದುಕೊಂಡು ಹೀನಾಯವಾಗಿ ಸೋತಿದ್ದರು.

ಕಾಂಗ್ರೆಸ್ ತೊರೆಯುವ ವೇಳೆಗೆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ತಾನು ಪಕ್ಷದ  ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ, ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

ಈ ಎಲ್ಲದರ ನಡುವೆ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಪಟಿಯಾಲದಿಂದ ಇನ್ನೂ ಕಾಂಗ್ರೆಸ್ ಸಂಸದರಾಗಿ ಉಳಿದಿದ್ದಾರೆ. ಮಾಜಿ ಕೇಂದ್ರ ಸಚಿವೆ ಆಗಿರುವ ಪ್ರಣೀತ್ ಕೌರ್ ಅವರು ತಮ್ಮ ಮಗಳು ಜೈ ಇಂದರ್ ಕೌರ್ ಅವರನ್ನು ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಬಿಜೆಪಿಯನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...