Homeಮುಖಪುಟವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ ಆರ್‌ಜೆಡಿಯ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

ವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ ಆರ್‌ಜೆಡಿಯ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

- Advertisement -
- Advertisement -

ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ ಬಿಹಾರ ವಿಧಾನಸಭೆಯಿಂದ ಅನರ್ಹಗೊಂಡಿದ್ದ ಮಾಜಿ ಆರ್‌ಜೆಡಿ ನಾಯಕ ಅನಿಲ್ ಸಹಾನಿ ಬುಧವಾರ (ಅ.22) ಬಿಜೆಪಿ ಸೇರಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಸಹಾನಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

2012ರಲ್ಲಿ ಸಹಾನಿ ರಾಜ್ಯಸಭಾ ಸಂಸದರಾಗಿದ್ದಾಗ, ಪ್ರಯಾಣ ಮಾಡದೆಯೇ ರಜೆ ಪ್ರಯಾಣ ರಿಯಾಯಿತಿ ಪಡೆಯಲು ನಕಲಿ ವಿಮಾನ ಟಿಕೆಟ್‌ಗಳನ್ನು ಸಲ್ಲಿಸಿದ್ದ ಪ್ರಕರಣದಲ್ಲಿ ದೆಹಲಿಯ ಸಿಬಿಐ ನ್ಯಾಯಾಲಯ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.

ಸಹಾನಿ ಅವರ ಪಕ್ಷಾಂತರ ಅವರ ತವರು ಜಿಲ್ಲೆ ಮುಝಫ್ಫರ್‌ಪುರದಲ್ಲಿ ಗಣನೀಯ ಪ್ರಮಾಣದಲ್ಲಿ ಇರುವ ಅತ್ಯಂತ ಹಿಂದುಳಿದ ವರ್ಗವಾದ ‘ನಿಶಾದ್’ ಸಮುದಾಯವನ್ನು ತಲುಪಲು ಬಿಜೆಪಿ ಮಾಡಿದ ಪ್ರಯತ್ನ ಎಂದು ಹೇಳಲಾಗ್ತಿದೆ.

2020ರ ವಿಧಾನಸಭಾ ಚುನಾವಣೆಯಲ್ಲಿ ಕುರ್ಹಾನಿಯಿಂದ ಸ್ಪರ್ಧಿಸಿದ್ದ ಸಹಾನಿ, ಬಿಜೆಪಿಯ ಕೇದಾರ್ ಗುಪ್ತಾ ಅವರನ್ನು 900ಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋಲಿಸಿದ್ದರು.

ಸಹಾನಿಯವರ ಅನರ್ಹತೆಯ ನಂತರ ನಡೆದ ಉಪಚುನಾವಣೆಯಲ್ಲಿ ಗುಪ್ತಾ ಗೆದ್ದು ಸಚಿವರಾದರು.

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...