Homeಮುಖಪುಟಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಪಿ ಬಿ ಸಾವಂತ್ ನಿಧನ

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಪಿ ಬಿ ಸಾವಂತ್ ನಿಧನ

- Advertisement -
- Advertisement -

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶ 91 ವರ್ಷದ ಪಿ.ಬಿ. ಸಾವಂತ್ ಅವರು ಹೃದಯಾಘಾತದಿಂದ ಪುಣೆಯ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ವಯೋಸಹಜ ಸಮಸ್ಯೆಯಿಂದಾಗಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ ಎಂದು ಸಾವಂತ್ ಅವರೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದ ಬಾಂಬೆ ಹೈಕೋರ್ಟ್‍ನ ಮಾಜಿ ನ್ಯಾಯಾಧೀಶ ಬಿ.ಜಿ.ಕೋಲ್ಸೆ ಪಾಟೀಲ್ ಹೇಳಿದ್ದಾರೆ.

1930, ಜೂನ್ 30 ರಂದು ಜನಿಸಿದ್ದ ಸಾವಂತ್, ಬಾಂಬೆ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟಿನಲ್ಲಿ 1957 ರಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದರು. 1973 ರಲ್ಲಿ ಬಾಂಬೆ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. ನ್ಯಾಯಾಧೀಶರಾಗಿ 1982 ರಲ್ಲಿ ಬಾಂಬೆ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ತನಿಖೆ ನಡೆಸಿದ್ದರು. ಅವರು ಹಲವಾರು ಟ್ರೇಡ್ ಯೂನಿಯನ್‌ಗಳಿಗೆ ಸಾಮಾಜಿಕ ಹಾಗೂ ಕಾನೂನು ಸಲಹೆಗಾರರಾಗಿದ್ದರು. 1989 ರ ಅಕ್ಟೋಬರ್ 6 ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪೀಠ ಏರಿದ್ದರು. ನಂತರ ಜೂ.6, 1995 ರಂದು ನಿವೃತ್ತರಾದರು. ಅಂದಿನಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದರು.

ಗುಜರಾತ್‌ನಲ್ಲಿ ನಡೆದ 2002 ರ ಕೋಮು ಗಲಭೆಗಳ ಬಗ್ಗೆ ತನಿಖೆ ನಡೆಸಲು ನ್ಯಾಯಮೂರ್ತಿ ವಿ.ಆರ್.ಕೃಷ್ಣ ಅಯ್ಯರ್ ನೇತೃತ್ವದ ಸತ್ಯ ಶೋಧನಾ ತಂಡವಾದ ಭಾರತೀಯ ಪೀಪಲ್ಸ್ ಟ್ರಿಬ್ಯೂನಲ್‌ನ ಸದಸ್ಯರಲ್ಲಿ ಸಾವಂತ್ ಕೂಡಾ ಒಬ್ಬರಾಗಿದ್ದರು.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದ ಸಹ-ಸಂಚಾಲಕರಲ್ಲಿ ಒಬ್ಬರಾಗಿದ್ದರು. ಹೀಗೆ ಸಾವಂತ್ ಅವರು ಕಾನೂನು ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕವಾಗಿಯೂ ಕಾಳಜಿಯುಳ್ಳವರಾಗಿದ್ದು, ಸಾಕಷ್ಟು ಮಹತ್ವದ ಪ್ರಕರಣಗಳ ತನಿಖೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತನ್ನ ಮೇಲಿನ ಎಫ್‌ಐಆರ್ ಕಾಪಿ ಪಡೆಯಲು ದಿಶಾಗೆ ಅನುಮತಿ: ಒಪ್ಪದ ದೆಹಲಿ ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...