Homeಮುಖಪುಟಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ನಿಧನ!

ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ನಿಧನ!

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ಮುಖಂಡರಾದ ಜಸ್ವಂತ್ ಸಿಂಗ್ (82) ಇಂದು ನಿಧನವಾಗಿದ್ದಾರೆ. ಅವರ ಅಗಲಿಕೆಗೆ ಪ್ರಧಾನಿ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮತ್ತು ಮಾಜಿ ಕ್ಯಾಬಿನೆಟ್ ಮಂತ್ರಿಯಾಗಿದ್ದ ಜಸ್ವಂತ್ ಸಿಂಗ್ ಅವರು ವರ್ಷಗಳಲ್ಲಿ ವಿದೇಶಾಂಗ ವ್ಯವಹಾರಗಳು, ರಕ್ಷಣಾ, ಮೇಲ್ಮೈ ಸಾರಿಗೆ ಸೇರಿದಂತೆ ಹಲವಾರು ಉನ್ನತ ಖಾತೆಗಳನ್ನು ಹೊಂದಿದ್ದರು. ಬಿಜೆಪಿಯೊಳಗೆ ಅವರನ್ನು ಒಬ್ಬ ಸಂಭಾವಿತ ರಾಜಕಾರಣಿ ಎಂದು ಪರಿಗಣಿಸಲಾಗಿತ್ತು ಮತ್ತು ಸಂಸತ್ತಿನಲ್ಲಿ ಬಿಸಿ ಚರ್ಚೆಗಳಿಗೆ ಹೆಸರುವಾಸಿಯಾಗಿದ್ದರು.

“ರಾಜಕೀಯ ಮತ್ತು ಸಮಾಜದ ವಿಷಯಗಳ ಬಗ್ಗೆ ಅವರ ವಿಶಿಷ್ಟ ದೃಷ್ಟಿಕೋನಕ್ಕಾಗಿ ಜಸ್ವಂತ್ ಸಿಂಗ್ ಜಿ ಅವರನ್ನು ಸ್ಮರಿಸಲಾಗುವುದು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ರಕ್ಷಣಾ ಸಚಿವವ ರಾಜನಾಥ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ಜಸ್ವಂತ್‌ ಸಿಂಗ್‌ರವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read