Homeಮುಖಪುಟಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಮತ್ತು ಅವರ ಪತ್ನಿ ಪ್ರೇಮಲತಾ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬಿರೇಂದರ್ ಸಿಂಗ್ ಅವರ ಪುತ್ರ ಹಾಗೂ ಬಿಜೆಪಿಯ ಮಾಜಿ ನಾಯಕ ಬ್ರಿಜೇಂದ್ರ ಸಿಂಗ್ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದರು. ಪ್ರೇಮಲತಾ ಸಿಂಗ್ ಹರಿಯಾಣದ ಮಾಜಿ ಬಿಜೆಪಿ ಶಾಸಕರಾಗಿದ್ದರೆ, ಬಿರೇಂದರ್ ಸಿಂಗ್ ಮೊದಲ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ನಾಲ್ಕು ದಶಕಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಬಿರೇಂದರ್ ಸಿಂಗ್ ಅವರು ಸುಮಾರು 10 ವರ್ಷಗಳ ಹಿಂದೆ ಬಿಜೆಪಿಗೆ ಸೇರಿದ್ದರು. ಮಾರ್ಚ್ 10 ರಂದು ಅವರ ಮಗ ಕಾಂಗ್ರೆಸ್ ಸೇರಿದ ನಂತರ, ಬಿರೇಂದರ್ ಸಿಂಗ್ ಕೂಡ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಸರ್ಕಾರದಲ್ಲಿ ಬಿರೇಂದರ್ ಸಿಂಗ್ ಕೇಂದ್ರ ಉಕ್ಕು ಸಚಿವರಾಗಿದ್ದರು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವರಾಗಿಯೂ ಅವರು ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ರದ್ದಾಗಿರುವ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನದ ಸಮಯದಲ್ಲಿ, ಬಿರೇಂದರ್ ಸಿಂಗ್ ರೈತರಿಗೆ ತಮ್ಮ ಬೆಂಬಲ ನೀಡಿದ್ದರು. ಬಿರೇಂದರ್ ಸಿಂಗ್ ಹರಿಯಾಣದ ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ಗೆ ಮರಳಿರುವ ಕುರಿತು ಕೇಳಿದ್ದಕ್ಕೆ ಉತ್ತರಿಸಿದ ಬಿರೇಂದರ್ ಸಿಂಗ್, “ನಾನು 42 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದೆ. ಕೆಲವು ಕಾರಣಾಂತರಗಳಿಂದ 2014ರಲ್ಲಿ ಬಿಜೆಪಿ ಸೇರಿದೆ. ಬಿಜೆಪಿ ಸೇರಿದ ಬಳಿಕ ಎರಡು ಪಕ್ಷಗಳ ನಡುವಿನ ಸಿದ್ದಾಂತ ನನಗೆ ವಿಭಿನ್ನವಾಗಿ ಕಂಡವು. ಕಾಂಗ್ರೆಸ್-ಬಿಜೆಪಿ ಸಿದ್ದಾಂತಗಳ ನಡುವೆ ವ್ಯತ್ಯಾಸವಿದೆ, ಅಂತರವಿದೆ. ಇದನ್ನು ನಾನು ಅನುಭವಿಸಿದ್ದೇನೆ. ಈ ಹಿನ್ನೆಲೆ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನ ಮಗ ಅನಿಲ್ ಆ್ಯಂಟನಿ ಚುನಾವಣೆಯಲ್ಲಿ ಸೋಲಬೇಕು: ಎ.ಕೆ ಆ್ಯಂಟನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...