Homeಮುಖಪುಟದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರ ಪತ್ನಿಯ ಬರ್ಬರ ಕೊಲೆ

ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವರ ಪತ್ನಿಯ ಬರ್ಬರ ಕೊಲೆ

- Advertisement -
- Advertisement -

ಕೇಂದ್ರದ ಮಾಜಿ ಮಂತ್ರಿ ಪಿಆರ್ ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಮ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ವಸಂತ್ ಸಾಗರ್‌ನ ಅವರ ನಿವಾಸದಲ್ಲಿ 67 ವಯಸ್ಸಿನ ಕಿಟ್ಟಿ ಅವರ ಮೃತದೇಹ ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದಿಂಬಿನಿಂದ ಉಸಿರುಗಟ್ಟಿಸಿ ಅವರನ್ನು ಕೊಲೆಗಯ್ಯಲಾಗಿದೆ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿನ್ನೆ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ಅವರು ತಮ್ಮ ಮನೆಕೆಲಸದ ಮಹಿಳೆ ಜೊತೆ ಇದ್ದ ಹೊತ್ತಿನಲ್ಲಿ  ಪರಿಚಯಸ್ತ ಧೋಬಿ ಮತ್ತು ಆತನ ಇಬ್ಬರು ಸಹಚರು ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮನೆಕೆಲಸದ ಮಹಿಳೆಯನ್ನು ಆರೋಪಿಗಳು ಕೋಣೆಯಲ್ಲಿ ಕೂಡಿಹಾಕಿದ್ದು ಮಹಿಳೆಗೂ ಸಣ್ಣಪುಟ್ಟ ಗಾಯಗಳಾಗಿವೆ.

ಸುಮಾರು ರಾತ್ರಿ 11 ಗಂಟೆ ಹೊತ್ತಿಗೆ ಪೊಲೀಸರು ಮಾಹಿತಿ ಪಡೆದು ಪ್ರಕರಣದ ಮುಖ್ಯ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.

67 ವರ್ಷ ವಯಸ್ಸಿನ ಕಿಟ್ಟಿ ಕುಮಾರಮಂಗಲಂ  ಸುಪ್ರೀಂ ಕೋರ್ಟ್‌ ನ್ಯಾಯವಾದಿಯಾಗಿದ್ದರು. ಅವರ ಪತಿ ಪಿಆರ್ ಕುಮಾರಮಂಗಲಂ   1984 ರಲ್ಲಿ ಮೊಟ್ಟಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ 1991 ರಿಂದ 92 ರ ವರೆಗೆ ಸಂಸದೀಯ ವ್ಯವಹಾರ ಮತ್ತು ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರಗಳ ರಾಜ್ಯ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 1992 ರಿಂದ  93 ರ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಮತ್ತು 1998 ರಲ್ಲಿ ದೇಶದ ವಿದ್ಯುತ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...