Homeಮುಖಪುಟಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ ನಿಧನ

ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ ನಿಧನ

- Advertisement -
- Advertisement -

ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಜಿಮ್ಮಿ ಕಾರ್ಟರ್ ಅವರು ನಿಧನರಾಗಿದ್ದಾರೆ, ಅವರಿಗೆ 100 ವರ್ಷ ವಯಸ್ಸಾಗಿತ್ತು. ಜಾರ್ಜಿಯಾದ ಪ್ಲೇನ್ಸ್‌ನಲ್ಲಿರುವ ಅವರ ಮನೆಯಲ್ಲಿ ಕಾರ್ಟರ್ ಕೊನೆಯುಸಿರೆಳೆದಿದ್ದಾರೆ ಎಂದು ಕಾರ್ಟರ್ ಸೆಂಟರ್ ತಿಳಿಸಿದೆ.

1977ರಿಂದ 1981ರವರೆಗೆ ಜಿಮ್ಮಿ ಕಾರ್ಟರ್ ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಶತಾಯುಸಿ ಕಾರ್ಟರ್ ಅತಿ ಹೆಚ್ಚು ಅವಧಿ ಜೀವಿಸಿದ್ದ ಅಮೆರಿಕದ ಅಧ್ಯಕ್ಷ ಎನಿಸಿಕೊಂಡಿದ್ದರು.

ಜಿಮ್ಮಿ ಕಾರ್ಟರ್ ಅವರು ಜಾಕ್, ಚಿಪ್, ಜೆಫ್ ಮತ್ತು ಆ್ಯಮಿ ಎಂಬ ನಾಲ್ವರು ಮಕ್ಕಳು, 11 ಮಂದಿ ಮೊಮ್ಮಕ್ಕಳು ಮತ್ತು 14 ಮಂದಿ ಮರಿಮೊಮ್ಮಕ್ಕಳನ್ನು ಅಗಲಿದ್ದಾರೆ.

“ಜಿಮ್ಮಿ ಕಾರ್ಟರ್ ಅಗಲಿಕೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಸಂತಾಪ ಸೂಚಿಸಿದ್ದು, “ಇಂದು ಜಗತ್ತು ಅಸಾಧಾರಣ ನಾಯಕ, ರಾಜಕಾರಣಿ ಮತ್ತು ಮಾನವತವಾದಿಯನ್ನು ಕಳೆದುಕೊಂಡಿದೆ” ಎಂದಿದ್ದಾರೆ.

ಹರಿಯಾಣದ ಗ್ರಾಮಕ್ಕೆ ‘ಕಾರ್ಟರ್‌’ ಹೆಸರು

ಜಿಮ್ಮಿ ಕಾರ್ಟರ್ ಭಾರತಕ್ಕೆ ಭೇಟಿ ನೀಡಿದ ಮೂರನೇ ಅಮೆರಿಕ ಅಧ್ಯಕ್ಷರಾಗಿದ್ದಾರೆ. 1977ರಲ್ಲಿ ತುರ್ತು ಪರಿಸ್ಥಿತಿ ತೆರವಾದ ಬಳಿಕ ಭಾರತಕ್ಕೆ ಆಗಮಿಸಿದ್ದ ಅವರು, ಸಂಸತ್‌ನಲ್ಲಿ ಭಾಷಣ ಮಾಡಿದ್ದರು. ಕಾರ್ಟರ್ ಅವರ ಭೇಟಿಯ ಗೌರವಾರ್ಥ ಹರಿಯಾಣದ ಗ್ರಾಮಕ್ಕೆ ‘ಕಾರ್ಟರ್‌ಪುರಿ’ ಎಂದು ಹೆಸರಿಡಲಾಗಿತ್ತು.

ನೊಬೆಲ್ ಪುರಸ್ಕೃತರು ಜಿಮ್ಮಿ ಕಾರ್ಟರ್

ಪ್ರಾಮಾಣಿಕತೆ ಮತ್ತು ಮಾನವೀಯ ಪ್ರಯತ್ನಗಳಿಗಾಗಿ ಸಾರ್ವತ್ರಿಕ ಶ್ಲಾಘನೆಗೆ ಪಾತ್ರರಾಗಿ ಜಿಮ್ಮಿ ಕಾರ್ಟರ್‌ ಅವರಿಗೆ, ಇಸ್ರೇಲ್-ಈಜಿಫ್ಟ್‌ ನಡುವೆ ಶಾಂತಿಗೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಹಾಗೂ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳನ್ನು ವಿಶ್ವಾದ್ಯಂತ ಪಸರಿಸಿದ್ದಕ್ಕಾಗಿ 2002ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಾರ್ಟರ್ ಅವರು 1978ರಲ್ಲಿ ಇಸ್ರೇಲ್‌ ಮತ್ತು ಈಜಿಫ್ಟ್ ನಡುವೆ ಶಾಂತಿ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸಿದ್ದರು.  

ಇದನ್ನೂ ಓದಿ : 15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...