Homeಮುಖಪುಟದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

- Advertisement -
- Advertisement -

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು ನಿಯಂತ್ರಿಸುವ ಏಕರೂಪ ನೀತಿಯನ್ನು ರೂಪಿಸುವಂತೆ ತೆಲಂಗಾಣ ಹೈಕೋರ್ಟ್ ಮಂಗಳವಾರ, ಫೆಬ್ರವರಿ 3 ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಮತ್ತು ಪೊಲೀಸ್ ಅಧಿಕಾರಿಗಳಿಂದ ಕಿರುಕುಳ ಆರೋಪದ ಮೇಲೆ ಹೈದರಾಬಾದ್ ಮೂಲದ ರೆಸ್ಟೋರೆಂಟ್ ಉದ್ಯಮಿ ಬಿಪಿನ್ ರಾಮದಾಸ್ ಸಲ್ಲಿಸಿದ ರಿಟ್ ಅರ್ಜಿಯನ್ನು ಆಲಿಸುವಾಗ ನ್ಯಾಯಮೂರ್ತಿ ಬಿ ವಿಜಯಸೇನ್ ರೆಡ್ಡಿ ಈ ನಿರ್ದೇಶನಗಳನ್ನು ನೀಡಿದ್ದಾರೆ.

ಒಂದೇ ಪ್ರದೇಶದಲ್ಲಿ ಹಲವಾರು ರೀತಿಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದರೂ ತಮ್ಮ ರೆಸ್ಟೋರೆಂಟ್ ಅನ್ನು ಮಾತ್ರ ಗುರಿಯಾಗಿಸಿಕೊಳ್ಳಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ರೆಸ್ಟೋರೆಂಟ್ ಸರಿಯಾದ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂಬ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ರೆಸ್ಟೋರೆಂಟ್‌ನಲ್ಲಿ ಕಾರ್ಮಿಕರನ್ನು ಬಂಧಿಸಿದ್ದಾರೆ ಎಂದು ಅರ್ಜಿದಾರರ ಪರವಾಗಿ ಸಲ್ಲಿಸಲಾಯಿತು.

ಅರ್ಜಿ ವಿರೋಧಿಸಿದ ಸರ್ಕಾರ, ಮಾಂಸಾಹಾರಿ ಹೋಟೆಲ್ ಹನುಮಾನ್ ದೇವಸ್ಥಾನದ ಸಮೀಪದಲ್ಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತು. ಈ ಬಗ್ಗೆ ಸ್ಥಳೀಯ ನಿವಾಸಿಗಳಿಂದ ಆಕ್ಷೇಪಣೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಜಿಎಚ್‌ಎಂಸಿ ಈ ಪ್ರದೇಶದಲ್ಲಿ ಸಂಚಾರ ಸಂಬಂಧಿತ ಸಮಸ್ಯೆಗಳನ್ನು ಸಹ ವರದಿ ಮಾಡಿದೆ, ಹೋಟೆಲ್‌ಗೆ ಶಾಶ್ವತ ಪರವಾನಗಿ ನೀಡಲು ಶಿಫಾರಸು ಮಾಡಿಲ್ಲ ಎಂದು ಹೇಳಿದೆ.

ರೆಸ್ಟೋರೆಂಟ್ ತಾತ್ಕಾಲಿಕ ಪರವಾನಗಿಯ ಮೇಲೆ ಕಾರ್ಯನಿರ್ವಹಿಸುತ್ತಿದೆ, ಮಾಂಸಾಹಾರ ಆಹಾರವನ್ನು ನೀಡುತ್ತಿದೆ ಎಂದು ನಾಗರಿಕ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

4 ವಾರಗಳಲ್ಲಿ ಸಮಗ್ರ ಮಾರ್ಗಸೂಚಿ ಕೋರಿದ ನ್ಯಾಯಾಲಯ

ವಾದ ಆಅಲಿಸಿದ ನ್ಯಾಯಮೂರ್ತಿ ರೆಡ್ಡಿ, ಪುರಸಭೆ ಆಡಳಿತ ಮತ್ತು ಗೃಹ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ನಾಲ್ಕು ವಾರಗಳಲ್ಲಿ ಸಮಗ್ರ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ನಿರ್ದೇಶಿಸಿದರು.

ಸೂಕ್ಷ್ಮ ಸ್ಥಳಗಳಲ್ಲಿ ಮಾಂಸ ಮಾರಾಟ ಮಳಿಗೆಗಳನ್ನು ಅನುಮತಿಸುವ ಮೊದಲು ಸ್ಥಳೀಯ ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯುವ ಅವಶ್ಯಕತೆಯನ್ನು ನೀತಿಯು ಒಳಗೊಂಡಿರಬಹುದು ಎಂದು ನ್ಯಾಯಾಲಯ ಗಮನಿಸಿದೆ.

ಅಂತಹ ಮಾರ್ಗಸೂಚಿಗಳನ್ನು ರೂಪಿಸುವವರೆಗೆ, ಅರ್ಜಿದಾರರು ಮಾಂಸಾಹಾರಿ ರೆಸ್ಟೋರೆಂಟ್ ಅನ್ನು ನಡೆಸಬಾರದು ಎಂದು ನ್ಯಾಯಾಲಯ ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...