Homeಮುಖಪುಟಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೆಟ್ರೊಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಾಗುತ್ತಿದ್ದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿದೆ. ಶನಿವಾರ (ಇಂದು) ಲೀಟರ್ ಪೆಟ್ರೊಲ್‌ ಮತ್ತು ಡೀಸೆಲ್‌ ಬೆಲೆ ತಲಾ 35 ಪೈಸೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪೆಟ್ರೊಲ್‌ ಬೆಲೆ 112.79 ರೂ ಆಗಿದ್ದು, ಚೆನ್ನೈನಲ್ಲಿ 105.74, ಮುಂಬೈನಲ್ಲಿ 114.81 ರೂ ಇದೆ. ಹಾಗೆಯೇ ಡೀಸೆಲ್‌ ಬೆಲೆ ಬೆಂಗಳೂರಿನಲ್ಲಿ 103.72 ರೂ, ಚೆನ್ನೈನಲ್ಲಿ 101.92 ರೂ ಹಾಗೂ ಮುಂಬೈನಲ್ಲಿ 105.86ರೂ ಆಗಿದೆ.

ಇನ್ನು ಪೆಟ್ರೊಲ್‌, ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ತಮ್ಮ ಬೊಕ್ಕಸ ತುಂಬಿಸಿಕೊಳ್ಳುವತ್ತ ಗಮನ ಹರಿಸಿರುವುದು ಶೋಚನೀಯ ಸಂಗತಿ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ಗೆ 32ರೂ ಮತ್ತು ರಾಜ್ಯ ಸರ್ಕಾರವು 27 ರೂ ಸುಂಕ ವಸೂಲಿ ಮಾಡುತ್ತಿದೆ. ಹಾಗೆಯೇ ಡೀಸೆಲ್ ಮೇಲೆ ಕೇಂದ್ರವು 31 ರೂ ಹಾಗೂ ರಾಜ್ಯವೂ 18 ರೂ ತೆರಿಗೆ ವಿಧಿಸುತ್ತಿದೆ.

ತರಕಾರಿ ಸೇರಿದಂತೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗುತ್ತಿರುವ ಜನಸಾಮಾನ್ಯರಿಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂಧನ ಬೆಲೆ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರವಾಗಿದ್ದರೆ ಇಂಧನದ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಪೂರ್ಣವಾಗಿ ಹಿಂಪಡೆಯಲಿ ಎಂದು ಜನರು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...