Homeಮುಖಪುಟ'ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ'ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

‘ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ’ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

- Advertisement -
- Advertisement -

ಬಿಜೆಪಿಯ ಓವರ್‌ಸೀಸ್ ಫ್ರೆಂಡ್ಸ್‌ನ (ಸಾಗರೋತ್ತರ ಸ್ನೇಹಿತರು) ಆಸ್ಟ್ರೇಲಿಯಾ ವಿಭಾಗದ ಸಂಸ್ಥಾಪಕರಲ್ಲಿ ಒಬ್ಬರಾದ ಬಾಲೇಶ್ ಧಂಖರ್ ಅವರು, ಸುಳ್ಳು ಉದ್ಯೋಗ ಜಾಹೀರಾತುಗಳ ಮೂಲಕ ಭೇಟಿಯಾಗಿ, ಐವರು ಮಹಿಳೆಯರಿಗೆ ಮಾದಕವಸ್ತು ನೀಡಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸೋಮವಾರದಂದು ಸಿಡ್ನಿಯ ಡೌನಿಂಗ್ ಸೆಂಟರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದ ತೀರ್ಪುಗಾರರು ಆತನ ವಿರುದ್ಧದ 39 ಆರೋಪಗಳಲ್ಲಿ ಪ್ರತಿಯೊಂದನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅವರು 13 ಅತ್ಯಾಚಾರ ಪ್ರಕರಣಗಳು, 6 ಅತ್ಯಾಚಾರಕ್ಕೆ ಅನುಕೂಲವಾಗುವಂತೆ ಮಾದಕ ವಸ್ತುವನ್ನು ಉದ್ದೇಶಪೂರ್ವಕವಾಗಿ ಸೇವಿಸಿದ ಘಟನೆಗಳು, 17 ಸಂಬಂಧಿಸಿದ ವೀಡಿಯೊಗಳನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿದ ಘಟನೆಗಳು ಮತ್ತು 3 ಅಸಭ್ಯವಾಗಿ ಹಲ್ಲೆಯ ಘಟನೆಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸಿದರು.

ಧಂಖರ್ ಮಹಿಳೆಯರಿಗೆ ವೈನ್ ಅಥವಾ ಐಸ್ ಕ್ರೀಂನಲ್ಲಿ ನಿದ್ರಾಮಾತ್ರೆ ಬೆರಸುತ್ತಿದ್ದನು. ಅವರು ಅದನ್ನು ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಅಲಾರಾಮ ಗಡಿಯಾರದ ಹಿಂದೆ ತನ್ನ ಫೋನ್ ಇಟ್ಟು, ತನ್ನ ಲೈಂಗಿಕ ಕ್ರಿಯೆಯ ವಿಡಿಯೋ ಚಿತ್ರಿಕರಿಸುತ್ತಿದ್ದನು.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ತೀರ್ಪುಗಾರರು, ಆತನ ಲೈಂಗಿಕ ದೌರ್ಜನ್ಯದ ರೆಕಾರ್ಡಿಂಗ್‌ಗಳನ್ನು ವೀಕ್ಷಿಸಬೇಕಾಗಿತ್ತು. ಆ ವೀಡಿಯೊಗಳನ್ನು ವೀಕ್ಷಿಸಿದ ನಂತರ ಅವರು ಆಘಾತಕ್ಕೊಳಗಾದರು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅಕ್ಟೋಬರ್ 2018 ರಲ್ಲಿ ಪೊಲೀಸರು ಧಂಖರ್ಸ್ ಸಿಬಿಡಿ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದಾಗ, ಡಜನ್‌ಗಟ್ಟಲೇ ವಿಡಿಯೋಗಳು ಸಿಕ್ಕಿವೆ. ಆ ವಿಡಿಯೋಗಳಲ್ಲಿ ಪ್ರಜ್ಞಾಹೀನರಾಗಿರುವ ಅಥವಾ ಹೆಣಗಾಡುತ್ತಿರುವ ಮಹಿಳೆಯರ ಲೈಂಗಿಕ ದೌರ್ಜನ್ಯದ ದೃಶ್ಯಗಳಿದ್ದವು. ಆ ವಿಡಿಯೊಗಳನ್ನು ಫೋಲ್ಡರ್‌ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದನ್ನು ಕೊರಿಯನ್ ಮಹಿಳೆಯ ಹೆಸರಿನಲ್ಲಿ ಸೇವ್ ಮಾಡಲಾಗಿದೆ.

ಏತನ್ಮಧ್ಯೆ, 2018 ರಲ್ಲಿ ಧಂಖರ್ ಅವರು ಸಂಘಟನೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿಯ ಆಸ್ಟ್ರೇಲಿಯಾ ಘಟಕ ಹೇಳಿದೆ. ”ಬಾಲೇಶ್ ಧನಕರ್ ಅವರು ಜುಲೈ 2018 ರಲ್ಲಿ OFBJP ಆಸ್ಟ್ರೇಲಿಯಾಕ್ಕೆ ರಾಜೀನಾಮೆ ನೀಡಿದ್ದಾರೆ. ನಾವು ಅವರ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಅವರು ಸಂಪೂರ್ಣ ಕಾನೂನು ಬಲವನ್ನು ಎದುರಿಸಬೇಕು” ಎಂದು ಸಂಘಟನೆ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...