Homeಮುಖಪುಟಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

ಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್ (41), ಯೋಗೇಶ್ ಕುಲಕರ್ಣಿ (57), ಸಾಗರ್ ಸಂಗ್ವಾಯ್ (37) ಮತ್ತು ಜಾಫರ್ ಅಹ್ಮದ್ ರಶೀದ್ ಅಹ್ಮದ್ ಉಸ್ಮಾನಿ (53) ಎಂದು ಗುರುತಿಸಲಾಗಿದೆ.

ದೌಂಡ್‌ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು, ತಮ್ಮ ಆಪ್ತ ಸಹಾಯಕನಿಗೆ ಜುಲೈ 16 ರಂದು ತನ್ನನ್ನು ರಿಯಾಜ್ ಶೇಖ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದರು. ಅವರು ದೂರು ನೀಡಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ಸಚಿವ ಸ್ಥಾನ ನೀಡುವ ಬಗ್ಗೆಗಿನ ಪ್ರಸ್ತಾಪವನ್ನು ಚರ್ಚಿಸಲು ಕುಲ್ ಅವರನ್ನು ಭೇಟಿಯಾಗಲು ಬಯಸುವುದಾಗಿ ರಿಯಾಜ್ ಹೇಳಿದ್ದಾರೆ ಎಂದು ಅವರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಶಾಸಕ ರಾಹುಲ್‌ ಕುಲ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಅಲ್ಲಿ ಆರೋಪಿಯು, ಸಚಿವ ಸ್ಥಾನ ನೀಡಲು ಹಿರಿಯ ರಾಜಕಾರಣಿಯೊಬ್ಬರು ಕೆಲಸ ಮಾಡಲಿದ್ದು, ಅದಕ್ಕಾಗಿ 100 ಕೋಟಿ ರೂ. ನೀಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ನಂತರ ಮಾತುಕತೆ ನಡೆಸಿದ ಶಾಸಕ ರಾಹುಲ್ ಅಂತಿಮವಾಗಿ 100 ಕೋಟಿಗಳ ಬದಲಿಗೆ 90 ಕೋಟಿ ರೂ.ಗಳು ಪಾವತಿಸುವುದಾಗಿ ಆರೋಪಿಗಳೊಂದಿಗೆ ಒಪ್ಪಿಕೊಂಡಿದ್ದಾರೆ. ಆದರೆ ಆರೋಪಿ ರಿಯಾಜ್ ಮುಂಗಡವಾಗಿ 20%ದಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ವೇಳೆ ಶಾಸಕ ಕೂಡ 20% ಹಣ ಮುಂಗಡವಾಗಿ ಕೊಡಲು ಒಪ್ಪಿಕೊಂಡು ಮತ್ತೊಮ್ಮೆ ಭೇಟಿಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ ರಾಹುಲ್ ಕುಲ್ ಅವರು ಘಟನೆಯ ಬಗ್ಗೆ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ತನಿಖೆಯ ಮೇಲ್ವಿಚಾರಣೆ ನಡೆಸಿ, ಪ್ರಕರಣವನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ಬಳಿಕ ನಗರ ಅಪರಾಧ ವಿಭಾಗದ ಪೊಲೀಸರು ಆರೋಪಿಗೆ ಬಲೆ ಬೀಸಿ, 18 ಕೋಟಿ ಮುಂಗಡವಾಗಿ ವಸೂಲಿ ಮಾಡಲು ಶಾಸಕರನ್ನು ಭೇಟಿ ಮಾಡಲು ಹೋಟೆಲ್‌ಗೆ ಬಂದಿದ್ದ ಆರೋಪಿ ಮತ್ತು ಆತನ ಸಹಚರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ವಿಚಾರಣೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ. ನಾಲ್ವರನ್ನು ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

“ಜಾಫರ್‌‌ ಉಸ್ಮಾನಿ ದೆಹಲಿಯಲ್ಲಿ ಯಾರೊಂದಿಗೊ ಸಂಪರ್ಕದಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಎಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಹೇಳಿದೆ. ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯ ಪಾತ್ರವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...