Homeಮುಖಪುಟಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

- Advertisement -
- Advertisement -

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನಿಸಿರುವುದಕ್ಕೆ ಸಂಬಂಧಪಟ್ಟಂತೆ ಕೇರಳದಲ್ಲಿ ನಾಲ್ವರು ವೈದ್ಯರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಸರ್ಕಾರ ತನಿಖೆಗೆ ಆದೇಶಿಸಿದೆ.

ನವೆಂಬರ್ 2ರಂದು ಜನಿಸಿದ ಮಗುವಿಗೆ ಹಲವು ರೀತಿಯ ಗಂಭೀರ ಸಮಸ್ಯೆಗಳಿವೆ. ಇದಕ್ಕೆ ಕಾರಣ ಸರ್ಕಾರಿ ವೈದ್ಯರು ಮತ್ತು ಎರಡು ಸ್ಕ್ಯಾನಿಂಗ್ ಸೆಂಟರ್‌ಗಳ ನಿರ್ಲಕ್ಷ್ಯ ಎಂದು ಮಗುವಿನ ಪೋಷಕರಾದ ಸುರುಮಿ ಮತ್ತು ಅನೀಶ್ ದಂಪತಿ ಆರೋಪಿಸಿದ್ದಾರೆ.

ಸುರುಮಿಯ ಗರ್ಭಾವಸ್ಥೆಯಲ್ಲಿ ಅನೇಕ ಅಲ್ಟ್ರಾಸೌಂಡ್‌ಗಳನ್ನು ನಡೆಸಿದರೂ ಭ್ರೂಣದ ಅಸಹಜತೆಗಳನ್ನು ಪತ್ತೆಹಚ್ಚಲು ವೈದ್ಯರು ಮತ್ತು ಸ್ಕ್ಯಾನಿಂಗ್ ಕೇಂದ್ರದವರು ವಿಫಲರಾಗಿದ್ದಾರೆ ಎಂದು ದಂಪತಿ ದೂರಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರಿಗೆ ದೂರು ನೀಡಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಿಂದ ವರದಿ ಕೇಳಿದೆ. ಪ್ರಕರಣ ಕುರಿತು ಆಲಪ್ಪುಝ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಕೆ ಶ್ರೀಜಿತ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಎಂ ಆರ್ ಮಧುಬಾಬು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಸುರುಮಿ ಅವರು ಗರ್ಭಾವಸ್ಥೆಯಲ್ಲಿ ಅಲಪ್ಪುಝ ಕಡ್ಡಪ್ಪುರ (ಬೀಚ್) ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ (ಡಬ್ಲ್ಯುಎಸಿ ಆಸ್ಪತ್ರೆ) ಇಬ್ಬರು ಹಿರಿಯ ವೈದ್ಯರ ಆರೈಕೆಯಲ್ಲಿದ್ದರು ಮತ್ತು ಏಳು ಸ್ಕ್ಯಾನ್‌ಗಳಿಗೆ ಒಳಗಾಗಿದ್ದರು. ಆದರೆ, ಈ ಸ್ಕ್ಯಾನ್‌ಗಳು ಗಮನಾರ್ಹವಾದ ಭ್ರೂಣದ ಅಸಹಜತೆಗಳನ್ನು ಪತ್ತೆ ಹಚ್ಚಲು ವಿಫಲವಾಗಿವೆ.

ನವೆಂಬರ್ 2 ರಂದು ಮಗು ಜನಿಸಿದಾಗ, ಅದರ ಮುಖದಲ್ಲಿ ಅಸಹಜತೆಗಳು, ಹೃದಯ ದೋಷ, ಕಾರ್ಯನಿರ್ವಹಿಸದ ಹಾಗೂ ತಪ್ಪಾಗಿ ಜೋಡಿಸಲಾದ ಕಣ್ಣುಗಳು ಮತ್ತು ಕಿವಿಗಳು, ಅಂಗ ವಿರೂಪಗಳು ಮತ್ತು ಬಾಯಿ ತೆರೆಯಲು ಆಗದಿರುವುದು ಸೇರಿದಂತೆ ಗಂಭೀರ ಸಮಸ್ಯೆಗಳು ಕಂಡು ಬಂದಿವೆ.

“ಹೆರಿಗೆಗಾಗಿ ಅಕ್ಟೋಬರ್ 30 ರಂದು ಡಬ್ಲ್ಯುಎಸಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿ ತೊಡಕುಗಳ ಕಾರಣ ಅಲಪ್ಪುಝ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಂಸಿಹೆಚ್) ವರ್ಗಾಯಿಸಲಾಗಿತ್ತು. ಎಂಸಿಹೆಚ್‌ನ ವೈದ್ಯರು ಮಗುವಿಗೆ ಸಮಸ್ಯೆಗಳು ಇರುವುದನ್ನು ತಕ್ಷಣ ಪತ್ತೆ ಹಚ್ಚಿದ್ದಾರೆ. ಈ ಹಿಂದಿನ ಸ್ಕ್ಯಾನ್‌ಗಳ ಸಾಮರ್ಥ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಸುರುಮಿ ಹೇಳಿದ್ದಾರೆ.

“ಭ್ರೂಣ ಸಮಸ್ಯೆಯಿಂದ ಕೂಡಿರುವುದು ಸ್ಕ್ಯಾನಿಂಗ್ ವೇಳೆ ಪತ್ತೆ ಮಾಡಿದ್ದರೆ, ಗರ್ಭಧಾರಣೆಯನ್ನು ಕೊನೆಗೊಳಿಸುವ ಒಂದು ಆಯ್ಕೆ ಇತ್ತು. ನನ್ನ ನಿಗದಿತ ಸ್ಕ್ಯಾನಿಂಗ್‌ ಸಮಯಗಳಲ್ಲಿ ವೈದ್ಯರು ಯಾವಾಗಲೂ ಇರುತ್ತಿರಲಿಲ್ಲ” ಎಂದು ಸುರುಮಿ ಆರೋಪಿಸಿದ್ದಾರೆ.

ಡಬ್ಲ್ಯುಎಸಿ ಆಸ್ಪತ್ರೆಯ ವೈದ್ಯರು ಮತ್ತು ಸ್ಕ್ಯಾನಿಂಗ್ ಸೆಂಟರ್‌ಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ದಂಪತಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಮುಖ್ಯಸ್ಥರಿಗೂ ದೂರು ನೀಡಿದ್ದಾರೆ. ಪ್ರಸ್ತುತ ಈ ಪ್ರಕರಣ ಕೇರಳದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ.

ಇದನ್ನೂ ಓದಿ | ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...