Homeಮುಖಪುಟಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ.

ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್ ಖಾನ್ ಬಿಡುಗಡೆಗೊಂಡವರು. ಜನವರಿ 5ರಂದು ಐವರು ಬಂಧಿತರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅಗತ್ಯ ಜಾಮೀನು ಷರತ್ತುಗಳನ್ನು ಪೂರೈಸಿದ ನಂತರ ನಾಲ್ವರು ಬಿಡುಗಡೆಗೊಂಡಿದ್ದಾರೆ.

ಅಡಿಷನಲ್ ಸೆಷನ್ಸ್ ಜಡ್ಜ್ ಸಮೀರ್ ಬಜ್ಪಾಯಿ ಅವರು, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಅವರು ಸಲ್ಲಿಸಿದ್ದ ಪ್ರತಿ ವ್ಯಕ್ತಿಗೆ 2 ಲಕ್ಷ ರೂಪಾಯಿ ಮೊತ್ತದ ಜಾಮೀನು ಬಾಂಡ್ ಮತ್ತು ಅದೇ ಮೊತ್ತದ (2 ಲಕ್ಷ ರೂಪಾಯಿ) ಎರಡು ಸ್ಥಳೀಯ ಜಾಮೀನುದಾರರನ್ನು ಸ್ವೀಕರಿಸಿದ್ದಾರೆ. ನಂತರ ನಾಲ್ವರ ಬಿಡುಗಡೆ ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಇನೊಬ್ಬ ಬಂಧಿತ ಶಾದಾಬ್ ಅಹ್ಮದ್, ಜಾಮೀನು ಬಾಂಡ್‌ಗಳನ್ನು ಸಲ್ಲಿಸಲು ಬುಧವಾರ ನ್ಯಾಯಾಲಯದ ಮುಂದೆ ಹಾಜರಾಗಿಲ್ಲ. ಹಾಗಾಗಿ, ಅವರು ಬಿಡುಗಡೆಗೊಂಡಿಲ್ಲ ಎಂದು ವರದಿಗಳು ಹೇಳಿವೆ.

ಬುಧವಾರ ರಾತ್ರಿ ತಿಹಾರ್ ಜೈಲಿನಿಂದ ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೀರಾನ್ ಹೈದರ್ ಬಿಡುಗಡೆಗೊಂಡರೆ, ಮೊಹಮ್ಮದ್ ಸಲೀಮ್ ಖಾನ್ ಮಂಡೋಲಿ ಜೈಲಿನಿಂದ ಹೊರಬಂದಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರಕರಣದ ಇನ್ನಿಬ್ಬರು ಪ್ರಮುಖ ಬಂಧಿತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.

ಎಲ್ಲರೂ, ಕಳೆದ 6 ವರ್ಷಗಳಿಂದ ಜೈಲಿನಲ್ಲಿದ್ದರು. ಜಾಮೀನು ದೊರೆತವರು ಹೊರಬಂದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಇನ್ನೂ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಗಮನಾರ್ಹ ಸಂಗತಿಯೆಂದರೆ, ಇವರಲ್ಲಿ ಯಾರೂ ಕೂಡ ಅಪರಾಧಿಗಳು ಎಂದು ಇನ್ನೂ ಸಾಭೀತಾಗಿಲ್ಲ.

ಐವರಿಗೆ ಜಾಮೀನು ದೊರೆತ ಹಿನ್ನೆಲೆ, ಪ್ರಕರಣ 11ನೇ ಆರೋಪಿಯಾಗಿರುವ ಸಲೀಂ ಮಲಿಕ್ ದೆಹಲಿಯ ಕಾರ್ಕರ್ಡೂಮಾ ಕೋರ್ಟ್‌ನಲ್ಲಿ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಜಾಮೀನು ಕೊಟ್ಟ ಒಬ್ಬರ ಮೇಲಿರುವಂತೆಯೇ (ಬಹುಶಃ ಮೊಹಮ್ಮದ್ ಸಲೀಂ ಖಾನ್ ಅಥವಾ ಇತರರಂತೆ)ನನ್ನ ಮೇಲೆಯೂ ಆರೋಪಗಳಿವೆ. ಹಾಗಾಗಿ, ಸಮಾನತೆಯ ಆಧಾರದ ಮೇಲೆ ಜಾಮೀನು ನೀಡಬೇಕೆಂದು ಕೋರಿದ್ದಾರೆ. ಅಂದರೆ, ಅವರಿಗೆ ಕೊಟ್ಟ ಮೇಲೆ ನನಗೂ ಕೊಡಿ, ನಮ್ಮಿಬ್ಬರ ಮೇಲಿರುವ ಆರೋಪಗಳು ಒಂದೇ ರೀತಿ ಇವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...