Homeಕರ್ನಾಟಕ‘ಆಕ್ಟ್‌-1978' ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

‘ಆಕ್ಟ್‌-1978′ ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

- Advertisement -
- Advertisement -

ಲಾಕ್‌ಡೌನ್‌ ತೆರವಿನ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಕನ್ನಡಿಗರ ಮನಗೆದ್ದಿರುವ ‘ಆಕ್ಟ್-1978′ ಸೇರಿ ನಾಲ್ಕು ಸಿನಿಮಾಗಳು ಭಾರತ ಸರಕಾರ ಆಯೋಜಿಸುವ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

‘ಹರಿವು’, ‘ನಾತಿಚರಾಮಿ’ ಸಿನಿಮಾಗಳ ನಿರ್ದೇಶಕರಾದ ಮಂಸೋರೆಯವರ ‘ಆಕ್ಟ್‌‌- 1978′, ಅಕಾಲಿಕ ಮರಣದಕ್ಕೆ ತುತ್ತಾದ ನಟ ಸಂಚಾರಿ ವಿಜಯ್‌ ಅಭಿನಯದ ಕೊನೆಯ ಸಿನಿಮಾ ‘ತಲೆದಂಡ’, ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ (ನಿರ್ದೇಶಕ ಸಾಗರ್‌ ಪುರಾಣಿಕ್‌), ಗಣೇಶ್‌ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್ ಅವರನ್ನು ನೆನೆದಿದ್ದಾರೆ. “ಸಂಚಾರಿ ವಿಜಯ್‌ ಸರ್ ಅಭಿನಂದನೆಗಳು. ನೀವು ನಟಿಸಿರುವ ಎರಡು ಸಿನೆಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿದೆ. ನಿಮ್ಮೊಂದಿಗೆ ಹಂಚಿಕೊಂಡಿದ್ದ ದೀರ್ಘಕಾಲದ ಕನಸೊಂದು ಇಂದು ನನಸಾಗಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ-ನಿಮ್ಮ ಆಕ್ಟ್-1978 ಸಿನಿಮಾ ‘ಭಾರತ ಸರಕಾರ’ ಆಯೋಜಿಸುವ ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಆಗಿರುವುದು ಹೆಮ್ಮೆ ಮತ್ತು ಖುಷಿಯ ವಿಚಾರ. ನಮ್ಮ ಖುಷಿಯನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ. ಕೊರೋನಾ ನಂತರದ ದುರಿತ ಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಿದಾಗಲೂ ಕೈ ಹಿಡಿದು ಪೊರೆದು, ನಮಗೂ ಚಿತ್ರರಂಗಕ್ಕೂ ಧೈರ್ಯ ತುಂಬಿದ ಪ್ರೇಕ್ಷಕರಿಗೂ, ಎಲ್ಲಾ ಹಂತಗಳಲ್ಲೂ ನಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ತಂಡದ ಪರವಾಗಿ ಧನ್ಯವಾದಗಳು” ಎಂದು ಮಂಸೋರೆ ತಿಳಿಸಿದ್ದಾರೆ.

ಭಾರತೀಯ ಪನೋರಮಾದ 52ನೇ ಆವೃತ್ತಿ ಗೋವಾದಲ್ಲಿ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರ ವತಿಯಿಂದ ನವೆಂಬರ್‌ 20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಒಟ್ಟು 25 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. 221 ಸಮಕಾಲೀನ ಭಾರತೀಯ ಚಲನಚಿತ್ರಗಳ ಪೈಕಿ ಈ ಸಿನಿಮಾಗಳನ್ನು ಆಯ್ಕೆಮಾಡಲಾಗಿದೆ. ಬಂಗಾಳಿ ಭಾಷೆಯ ಐದು ಸಿನಿಮಾ, ಬೊಡೊ-1, ಸಿನಿಮಾ, ದಿಮಸ- 1, ಗುಜರಾತಿ- 1, ಹಿಂದಿ- 2, ಕನ್ನಡ- 4, ಮಲಯಾಳಂ- 2, ಮರಾಠಿ- 5, ಮಿಶಿಂಗ್‌-1, ಸಂಸ್ಕೃತ- 1, ತಮಿಳು- 1, ತೆಲುಗು- 1 ಸಿನಿಮಾಗಳು ಪ್ರದರ್ಶನ ಕಾಣಲಿವೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...