Homeಮುಖಪುಟಗುಜರಾತ್: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ನಾಲ್ವರು ಕಾರ್ಮಿಕರ ಸಾವು

ಗುಜರಾತ್: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ನಾಲ್ವರು ಕಾರ್ಮಿಕರ ಸಾವು

- Advertisement -
- Advertisement -

ಗುಜರಾತ್‌ನ ಸೂರತ್‌ನ ಪಲ್ಸಾನಾ-ಕಟೋದರ ರಸ್ತೆಯಲ್ಲಿರುವ ಡೈಯಿಂಗ್ ಘಟಕದಲ್ಲಿ ಸೆಪ್ಟಿಕ್ ಟ್ಯಾಂಕ್‌ನೊಳಗೆ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಮಂಗಳವಾರ ಸಂಜೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಆರಂಭದಲ್ಲಿ ಪ್ರಜ್ಞಾಹೀನರಾದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇತರ ಇಬ್ಬರನ್ನು ರಕ್ಷಿಸಲು ಪ್ರಯತ್ನಿಸಲಾಯಿತು ಆದರೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಅಂತಿಮವಾಗಿ ನಾಲ್ವರು ಕಾರ್ಮಿಕರು ಟ್ಯಾಂಕ್‌ನೊಳಗಿನ ಅಪಾಯಕಾರಿ ಪರಿಸ್ಥಿತಿಗಳಿಗೆ ಬಲಿಯಾದರು.

ತ್ವರಿತವಾಗಿ ಅವರನ್ನು ಹೊರತೆಗೆದು, ಆಸ್ಪತ್ರೆಗೆ ಸಾಗಿಸಲಾಯಿತು. ಕಾರ್ಮಿಕರ ಸಾವಿನ ಬಗ್ಗೆ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದಾರೆ.

ಕಾರ್ಮಿಕರು ಬಿಹಾರ ಮೂಲದವರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗುರುತಿಸುವ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೀಕರ್ ಓಂ ಬಿರ್ಲಾರಿಂದ ಬಿಜೆಪಿ ಪರ ರಹಸ್ಯ ಪ್ರಚಾರ: ಅಶೋಕ್ ಗೆಹ್ಲೋಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...