Homeಮುಖಪುಟಕಾಣೆಯಾಗಿದ್ದ ನಾಲ್ವರು ಶಾಸಕರನ್ನು ಪತ್ತೆ ಹಚ್ಚಿ, ಮರಳಿ ಪಕ್ಷಕ್ಕೆ ಕರೆತಂದ NCP...

ಕಾಣೆಯಾಗಿದ್ದ ನಾಲ್ವರು ಶಾಸಕರನ್ನು ಪತ್ತೆ ಹಚ್ಚಿ, ಮರಳಿ ಪಕ್ಷಕ್ಕೆ ಕರೆತಂದ NCP…

- Advertisement -
- Advertisement -

ಅಜಿತ್ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶನಿವಾರದಿಂದ ಕಾಣೆಯಾಗಿದ್ದ ಎನ್‌ಸಿಪಿ ಪಕ್ಷದ ನಾಲ್ವರು ಶಾಸಕರು ಸಂಪರ್ಕಕ್ಕೆ ಸಿಕ್ಕಿದ್ದು ಮರಳಿ ಎನ್‌ಸಿಪಿ ಪಕ್ಷಕ್ಕೆ ಮರಳಿದ್ದಾರೆ ಪಕ್ಷ ತಿಳಿಸಿದೆ. ಎನ್‌ಸಿಪಿಯ 54 ಶಾಸಕರಲ್ಲಿ ಅಜಿತ್‌ ಪವಾರ್‌ ಹೊರತುಪಡಿಸಿ 53 ಮಂದಿ ಮತ್ತೆ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಮೂಲಗಳ ಪ್ರಕಾರ ಕೆಲ ಬಂಡಾಯ ಶಾಸಕರನ್ನು ಬಿಜೆಪಿಯು ಶನಿವಾರ ದೆಹಲಿಗೆ ಕಳಿಸಿದೆ. ಮೂವರು ಶಾಸಕರಾದ ದೌಲತ್ ದರೋಡಾ, ಅನಿಲ್ ಪಾಟೀಲ್ ಮತ್ತು ನಿತಿನ್ ಪವಾರ್ ಅವರನ್ನು ಗುರಗಾಂವ್‌ನಿಂದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಯುವ ವಿಭಾಗವು ರಕ್ಷಿಸಿ ಮರಳಿ ಮುಂಬೈಗೆ ಕರೆತಂದಿದೆ.

ಮೂವರು ಶಾಸಕರು ಇಂದು ಮುಂಜಾನೆ 4: 30 ರ ಸುಮಾರಿಗೆ ಮುಂಬೈ ತಲುಪಿದರು. ಮತ್ತೊಬ್ಬ ಶಾಸಕ ನರ್ಹಾರಿ ಝಿರ್ವಾಲ್ ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ.

“ಪಕ್ಷದ 52 ಶಾಸಕರು ನಮ್ಮ ಬಳಿಗೆ ಬಂದಿದ್ದಾರೆ, ಇನ್ನೊಬ್ಬರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಶನಿವಾರದ ಕ್ಷಿಪ್ರ ಘಟನೆಗಳ ನಂತರ ನಾಪತ್ತೆಯಾದ ದೌಲತ್ ದರೋಡಾ ಕಳೆದುಹೋಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಆದರೆ ಭಾನುವಾರ ವೀಡಿಯೊವೊಂದರಲ್ಲಿ ಅವರು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ನನ್ನ ಬೆಂಬಲವಿದೆ, ನಾನು ಸುರಕ್ಷಿತ. ಗಡಿಯಾರ ಚಿಹ್ನೆಯಲ್ಲಿ (ಎನ್‌ಸಿಪಿ) ಚುನಾವಣೆಯಲ್ಲಿ ಗೆದ್ದು ನಾನು ಬಂದಿದ್ದೇನೆ, ಆದ್ದರಿಂದ ಪಕ್ಷವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಶರದ್ ಪವಾರ್ ಮತ್ತು ಅಜಿತ್ ಪವಾರ್ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾನು ಅದರೊಂದಿಗೆ ಇರುತ್ತೇನೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಅವರು ಹೇಳಿದ್ದರು.

ಬಹುಮತ ಸಾಬೀತುಪಡಿಸುವ ದೃಷ್ಟಿಯಿಂದ ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಎಲ್ಲರೂ ತಮ್ಮ ಶಾಸಕರನ್ನು ಮುಂಬೈನ ಐಷಾರಾಮಿ ಹೋಟೆಲ್‌ಗಳನ್ನು ಇರಿಸುವ ಮೂಲಕ ಕಾವಲು ಕಾಯುತ್ತಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...