Homeಮುಖಪುಟಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

- Advertisement -
- Advertisement -

ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಗ್ರೇಟರ್ ಚೆನ್ನೈ ಸೈಬರ್ ಅಪರಾಧ ಪೊಲೀಸರು ಮಂಗಳವಾರ (ಸೆ.30) ಯೂಟ್ಯೂಬರ್ ಫೆಲಿಕ್ಸ್ ಜೆರಾಲ್ಡ್ ಅವರನ್ನು ಬಂಧಿಸಿದ್ದಾರೆ ವರದಿಯಾಗಿದೆ.

ಸೆಪ್ಟೆಂಬರ್ 27ರಂದು ನಟ ವಿಜಯ್ ನೇತೃತ್ವದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.

ಮಂಗಳವಾರ ಮುಂಜಾನೆ ಚೆನ್ನೈನ ನುಂಗಂಬಕ್ಕಂನಲ್ಲಿರುವ ಮನೆಯಿಂದ ಜೆರಾಲ್ಡ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಡ್ ಪಿಕ್ಸ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಘಟನೆಗೆ ಸರ್ಕಾರವೇ ಕಾರಣ ಎಂದು ಜೆರಾಲ್ಡ್ ಆರೋಪಿಸಿದ್ದರು ಮತ್ತು ವಿಜಯ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು ಎಂದು ವರದಿಗಳು ಹೇಳಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕಾಲ್ತುಳಿತದ ಬಗ್ಗೆ ವದಂತಿಗಳನ್ನು ಹರಡಿದ ಆರೋಪದ ಮೇಲೆ ಬಿಜೆಪಿ ರಾಜ್ಯ ಕಲೆ ಮತ್ತು ಸಂಸ್ಕೃತಿ ಕಾರ್ಯದರ್ಶಿ ಸಗಾಯಂ (38) ಮತ್ತು ಟಿವಿಕೆ ಕಾರ್ಯಕರ್ತರಾದ ಮಾಂಗಾಡು ಮೂಲದ ಶಿವನೇಶ್ವರನ್ (36) ಹಾಗೂ ಅವಡಿಯ ಶರತ್ ಕುಮಾರ್ (32) ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಚಲಿತ ವಿದ್ಯಮಾನಗಳ ಮೇಲೆ ಕೇಂದ್ರೀಕರಿಸಿ ವಿಡಿಯೋ ಮಾಡುವ ತಮಿಳು ಭಾಷೆಯ ಯೂಟ್ಯೂಬರ್‌ ಜೆರಾಲ್ಡ್, ಕರೂರು ದುರಂತದ ತನಿಖೆಯ ಭಾಗವಾಗಿ ಬಂಧನಕ್ಕೆ ಒಳಗಾದ ಇತ್ತೀಚಿನ ವ್ಯಕ್ತಿಯಾಗಿದ್ದಾರೆ.

ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ‘ತಪ್ಪು ಮಾಹಿತಿ ಹರಡಿದ’ ಆರೋಪದ ಮೇಲೆ 25 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಉಳಿದ ಆರೋಪಿಗಳ ವಿರುದ್ಧ ಬಂಧನ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...