Homeಕರ್ನಾಟಕಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಹತ್ಯೆ

ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಹತ್ಯೆ

- Advertisement -
- Advertisement -

ಗದಗದ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆಗೈದಿರುವ ಘಟನೆ ನಗರದಲ್ಲಿ ಗುರುವಾರ (ಏ.18) ಮಧ್ಯರಾತ್ರಿ ನಡೆದಿದೆ.

ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಹತ್ಯೆಯಾದವರು ಎಂದು ತಿಳಿದು ಬಂದಿದೆ.

ಸುನಂದ ಬಾಕಳೆ ಪುತ್ರ ಕಾರ್ತಿಕ್ ಬಾಕಳೆಯ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಕರು ಏ.17 ರಂದು ಮನೆಗೆ ಬಂದಿದ್ದರು. ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಕೊಪ್ಪಳದ ಭಾಗ್ಯ ನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮ ಅವರು ಹೋಟೆಲ್ ಉದ್ಯಮಿಯಾಗಿದ್ದು, ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು.

ಇದನ್ನೂ ಓದಿ : ಆರ್‌ಡಿ ಪಾಟೀಲ್ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ ಬಿಜೆಪಿ ಸಂಸದ; ಪಿಎಸ್‌ಐ ಹಗರಣದ ಕಿಂಗ್‌ಪಿನ್ ಸಹಕಾರ ಕೇಳಿದ ಉಮೇಶ್ ಜಾಧವ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...