Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...