HomeಮುಖಪುಟELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

ELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣೆಗೆ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದರೆ, ಕಾಂಗ್ರೆಸ್ ತೆಲಂಗಾಣ ರಾಜ್ಯದಲ್ಲಿ ಮಾತ್ರ ಮುನ್ನಡೆಯನ್ನು ಸಾಧಿಸಿಕೊಂಡು ತೃಪ್ತಿ ಪಟ್ಟುಕೊಂಡಿದೆ. ತೆಲಂಗಾಣದ ಜೊತೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಾರೀ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಕಾಂಗ್ರೆಸ್‌ಗೆ ಮತ್ತೆ ಅವಲೋಕನ ಮಾಡುವಂತೆ ಮಾಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ, ಬಿಜೆಪಿಯ ಜೊತೆ ಹೋದ ಜ್ಯೋತಿರಾಧಿತ್ಯ ಸಿಂಧಿಯಾ ಬಣದ ಮೇಲೆ ಬಿಜೆಪಿಯೊಳಗೆ ವಿರೋಧವಿತ್ತು. ಇದಲ್ಲದೆ ಸಿಂಧಿಯಾ ಬಣಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದ ಕಾರಣ ಬಿಜೆಪಿಯ ಜೊತೆ ಅಸಮಾಧಾನವಿತ್ತು. ಕಾಂಗ್ರೆಸ್‌ನಲ್ಲಿ ಆರಂಭದಲ್ಲಿ ಹೆಚ್ಚಿದ ಉತ್ಸಾಹವು ಬಿಜೆಪಿಗೆ ಹೊಸ ಸವಾಲನ್ನು ತಂದೊಡ್ಡಿತ್ತು. ನಿರಂತರ ಆಡಳಿತದ ವಿರೋಧಿ ಅಲೆಯೂ ಬಿಜೆಪಿಯ ಎದುರಿಗಿತ್ತು. ಅಲ್ಲದೆ ಪರಿಶಿಷ್ಟ ಪಂಗಡಗಳ ಮತಗಳು ಕೈತಪ್ಪುವ ಭಯವನ್ನು ಶಿವರಾಜ್ ಸಿಂಗ್‌ ಚೌವ್ಹಾಣ್ ಅವರಿಗಿತ್ತು. ಆದರೆ ಕೊನೇ ಕ್ಷಣದಲ್ಲಿ ಇವೆಲ್ಲವನ್ನೂ ಮೆಟ್ಟಿ ನಿಂತು ಬಿಜೆಪಿ ಗೆಲುವನ್ನು ಸಾಧಿಸಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 116 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ 162 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸುವ ಮೂಲಕ ಬಹುಮತಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ 65 ಕ್ಷೇತ್ರಗಳಲ್ಲಿ ಮತ್ತು ಬಿಎಸ್ಪಿ 2 ಕ್ಷೇತ್ರಗಳಲ್ಲಿ ಮಧ್ಯಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಣಿ ಹಿಡಿಯುವುದು ಸ್ಪಷ್ಟವಾಗಿ ಕಂಡುಬರುತ್ತಿದೆ.

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 101 ಕ್ಷೇತ್ರಗಳ ಅವಶ್ಯಕತೆ ಇದ್ದು, ರಾಜಸ್ಥಾನದಲ್ಲಿ ಬಿಜೆಪಿ 111ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು ಮ್ಯಾಜಿಕ್‌ ನಂಬರನ್ನು ದಾಟಿದೆ. ಕಾಂಗ್ರೆಸ್ 72ಕ್ಷೇತ್ರಗಳಲ್ಲಿ, ಬಿಎಸ್ಪಿ 3 ಕ್ಷೇತ್ರಗಳಲ್ಲಿ ಮತ್ತು ಇತರರು 13ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಕೂಡ ಬಿಜೆಪಿ ಸರಕಾರ ರಚನೆಯ ಎಲ್ಲಾ ಬೆಳವಣಿಗೆಗಳು ಎದ್ದು ಕಾಣುತ್ತಿದೆ. ರಾಜಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಐದು ವರ್ಷಕ್ಕೊಮ್ಮೆ ಸರಕಾರಗಳು ಬದಲಾಗುತ್ತದೆ. ಈ ಮೂಲಕ ಈ ಇತಿಹಾಸ ಮುರಿದು ಬೀಳುತ್ತಾ ಎನ್ನುವ ಸಂಶಯವನ್ನು ರಾಜಸ್ಥಾನದ ಜನತೆ ಸುಳ್ಳಾಗಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಸರಕಾರ ರಚನೆಗೆ 60 ಸ್ಥಾನಗಳ ಅವಶ್ಯಕತೆ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಬಿಆರ್‌ಎಸ್‌ 38 ಕ್ಷೇತ್ರಗಳಲ್ಲಿ ಬಿಜೆಪಿ 10 ಕ್ಷೇತ್ರಗಳಲ್ಲಿ ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಕಾರ ರಚಿಸುವ ಎಲ್ಲಾ ಅವಕಾಶಗಳು ಕಂಡು ಬರುತ್ತಿದೆ. ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ 30,000ಕ್ಕೂ ಅಧಿಕ ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿದ್ದಾರೆ. ಬಿಆರ್‌ಎಸ್‌ ವಿರುದ್ಧದ ಆಡಳಿತ ವಿರೋಧಿ ಅಲೆ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆಗೆ ಹಾದಿಯನ್ನು ಸುಗಮಗೊಳಿಸಿದೆ.

ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರಕಾರ ರಚನೆಗೆ 46 ಸ್ಥಾನಗಳನ್ನು ಪಡೆಯಬೇಕಿದೆ. ಬಿಜೆಪಿ 54 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, 35 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇತರರು 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಭಾರೀ ಜಿದ್ದಾ ಜಿದ್ದಿನ ಫೈಟ್‌ ನಡೆಯುತ್ತಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಬಿಜೆಪಿ ಮ್ಯಾಜಿಕ್‌ ನಂಬರ್‌ ದಾಟಿ ಭಾರೀ ಮುನ್ನಡೆಯನ್ನು ಸಾಧಿಸಿದೆ.

 ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...