Homeಮುಖಪುಟನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ತಲಾ 2 ರಾಜ್ಯಗಳಲ್ಲಿ ಮುನ್ನಡೆ

- Advertisement -
- Advertisement -

ಪಂಚರಾಜ್ಯಗಳ ಚುನಾವಣೆಯ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಬಿಜೆಪಿ, ಛತ್ತೀಸ್‌ಘಡದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಬಿಜೆಪಿ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ನಾಲ್ಕು ರಾಜ್ಯಗಳ 638 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7,643 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅವರ ಭವಿಷ್ಯ ಇನ್ನು ಕೆಲವೇ ಕ್ಷಣದಲ್ಲಿ ನಿರ್ಧಾರವಾಗಲಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 152 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ 47 ಮತ್ತು ಬಿಜೆಪಿ 42 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಮತಗಟ್ಟೆ ಸಮೀಕ್ಷೆಯ ರೀತಿಯಲ್ಲೇ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.

ರಾಜಸ್ಥಾನದಲ್ಲಿ 105 ಕ್ಷೇತ್ರಗಳಲ್ಲಿ ಬಿಜೆಪಿ  78 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿಕೊಂಡಿದೆ. ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯ ಈ ಸಲ ಮುರಿಯಲಿದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಅರ್ಧಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಆಡಳಿತರೂಢ ಭಾರತ ರಾಷ್ಟ್ರೀಯ ಸಮಿತಿ(BRS)ಗೆ ತೀವ್ರ ಹಿನ್ನಡೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಒಟ್ಟು ಈವರೆಗಿನ ಫಲಿತಾಂಶದಲ್ಲಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಎರಡು ರಾಜ್ಯಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸೆಮಿಫೈನಲ್‌ ಎಂದು ಹೇಳಲಾಗುತ್ತಿದ್ದು ಅಂತಿಮವಾಗಿ ಯಾವ ರಾಜ್ಯದಲ್ಲಿ ಯಾವ ಪಕ್ಷಗಳು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕಾದು ನೋಡಬೇಕಿದೆ.

ನ.7ರಿಂದ 30ರ ಅವಧಿಯಲ್ಲಿ ಐದು ರಾಜ್ಯಗಳಿಗೆ ಚುನಾವಣೆ ನಡೆದಿತ್ತು. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ ನಡೆಯಲಿದೆ. ಡಿ.3ರಂದು ನಿಗದಿಯಾಗಿರುವ ಮತ ಎಣಿಕೆಯನ್ನು ಬೇರೆ ದಿನಕ್ಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮಿಜೋರಾಂನ ಎನ್‌ಜಿಒ ಕೋ ಆರ್ಡಿನೇಷನ್‌ ಕಮಿಟಿ ರಾಜ್ಯದಾದ್ಯಂತ ಶುಕ್ರವಾರ ಪ್ರತಿಭಟನೆ ನಡೆಸಿತ್ತು. ಹೀಗಾಗಿ ಸೋಮವಾರ ಮತ ಎಣಿಕೆ ನಡೆಸಲು ಆಯೋಗ ತೀರ್ಮಾನಿಸಿದೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...