ಭದ್ರತಾ ಪಡೆಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ.
24 ಗಂಟೆಗಳಲ್ಲಿ 9 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ. ಇಂದು ಮುಂಜಾನೆ ನಡೆದ ಗುಂಡಿನ ದಾಳಿ ಯಲ್ಲಿ ಇಬ್ಬರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶೋಪಿಯಾನ ಜಿಲ್ಲೆಯ ರಬಾನ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಐವರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಹತ್ಯೆಗೈದಿದ್ದರು. ಇದು ಎರಡನೇ ದಾಳಿಯಾಗಿದ್ದು ಮತ್ತೆ ನಾಲ್ವರು ಉಗ್ರರು ಹತರಾಗಿದ್ದಾರೆ.
ಉಗ್ರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದೆ. ಹತ್ಯೆಯಾಗಿರುವ ಉಗ್ರರ ಮಾಹಿತಿಯನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಆದರೆ ಈಗ ಹತ್ಯೆಯಾಗಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿರಬಹುದು ಎಂದು ಶಂಕಿಸಲಾಗಿದೆ.
ಶೋಧ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿಯ ಮುಖಾಮುಖಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ದಕ್ಷಿಣ ಕಾಶ್ಮೀರದ ಜಿಲ್ಲೆಯ ಪಿಂಜೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬಾಯ್ಕಟ್ ಚೀನಾ ಎಂಬ ಮಕ್ಕಳಾಟ: ಪ್ರಪಂಚವನ್ನು ಚೀನಾ ಆವರಿಸುತ್ತಿವುದು ಬಗೆ


