Homeಮುಖಪುಟಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

- Advertisement -
- Advertisement -

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಚೈತಾಲಿ ಚಟರ್ಜಿ ದಾಸ್ ಅವರ ವಿಭಾಗೀಯ ಪೀಠವು, ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಪ್ರಕಾರ, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಿದೆ. ಈಗಾಗಲೇ 10 ಲಕ್ಷ ರೂಪಾಯಿ ಕೊಟ್ಟಿರುವುದರಿಂದ ಬಾಕಿ 20 ಲಕ್ಷ ರೂಪಾಯಿ ಕೊಡುವಂತೆ ಸೂಚಿಸಿದೆ. ಮೂರು ತಿಂಗಳ ಒಳಗೆ ಹಣ ಪಾವತಿಸುವಂತೆ ನಿರ್ದೇಶಿಸಿದೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಎರಡು ತಿಂಗಳ ಒಳಗೆ ನೀಡಬೇಕು ಎಂದು ಶುಕ್ರವಾರ (ನವೆಂಬರ್ 21) ನೀಡಿದ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

“ಮಲ ಹೊರುವ ಪದ್ದತಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ. ಅದು ಇನ್ನೂ ಮುಂದುವರಿದಿರುವುದು ದೇಶದ ಆತ್ಮ ಸಾಕ್ಷಿಗೆ ಕಪ್ಪುಚುಕ್ಕೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಕಡ್ಡಾಯ ಮೇಲ್ವಿಚಾರಣಾ ಕಾರ್ಯವಿಧಾನಗಳು ಅಸ್ತಿತ್ವದಲ್ಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧದ ಎಫ್‌ಐಆರ್ ಮಾತ್ರ ಉಲ್ಲೇಖಿಸುವ ಪೊಲೀಸರ ಅಫಿಡವಿಟ್ ಅಸಮರ್ಪಕವಾಗಿದೆ ಎಂದು ನ್ಯಾಯಾಲಯ ಟೀಕಿಸಿದೆ.

ಈ ಕುರಿತು ವರದಿ ಸಲ್ಲಿಸುವಂತೆ ಉಪ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಮತ್ತು ಒಂದು ತಿಂಗಳೊಳಗೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಪರಿಹಾರ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಲೈವ್ ಲಾ ವರದಿ ವಿವರಿಸಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರಾದ ನಾಲ್ವರು ಕಾರ್ಮಿಕರು ಕೋಲ್ಕತ್ತಾ ಮಹಾನಗರ ಪಾಲಿಕೆಯ ಪರಿಸರ ಮೂಲಸೌಕರ್ಯ ಸುಧಾರಣಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರನ್ನುಒಳಚರಂಡಿ ಸ್ವಚ್ವಗೊಳಿಸಲು ಮ್ಯಾನ್‌ಹೋಲ್‌ಗೆ ಇಳಿಸಲಾಗಿತ್ತು. ಅಲ್ಲಿ ವಿಷಕಾರಿ ಅನಿಲ ಉಸಿರಾಡಿ ಸಾವನ್ನಪ್ಪಿದ್ದರು.

19 ವರ್ಷದ ಶಬೀರ್ ಹುಸೈನ್, 35 ವರ್ಷದ ಮೊಹಮ್ಮದ್ ಅಲಂಗೀರ್, 22 ವರ್ಷದ ಜಹಾಂಗೀರ್ ಅಲಮ್ ಮತ್ತು 20 ವರ್ಷದ ಲಿಯಾಕತ್ ಅಲಿ ಮೃತ ದುರ್ದೈವಿಗಳು.

2013ರ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆಯಡಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳನ್ನು ಮನುಷ್ಯರಿಂದ ಅಂದರೆ ಆಧುನಿಕ ಯಂತ್ರಗಳನ್ನು ಬಳಸದೆ ಸ್ವಚ್ಚ ಮಾಡಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...