Homeಮುಖಪುಟವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ 'ಫಾಕ್ಸ್‌ಕಾನ್': ವರದಿ

ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

- Advertisement -
- Advertisement -

ಐಪೋನ್ ಬಿಡಿ ಭಾಗಗಳ ತಯಾರಿಕಾ ಕಂಪನಿ ಫಾಕ್ಸ್‌ಕಾನ್‌ ಉದ್ಯೋಗ ನೀಡುವ ವೇಳೆ ವಿವಾಹಿತ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

‘ಅವಿವಾಹಿತ ಮಹಿಳೆಯರಿಗೆ ಹೋಲಿಸಿದರೆ ವಿವಾಹಿತರಿಗೆ ಹೆಚ್ಚು ಕೌಟುಂಬಿಕ ಜವಾಬ್ದಾರಿಗಳಿವೆ’ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ರಾಯಟರ್ಸ್‌ ತನಿಖಾ ವರದಿ ಹೇಳಿದೆ. ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್‌ನಲ್ಲಿರುವ ಘಟಕವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫಾಕ್ಸ್‌ಕಾನ್ ಕಂಪನಿಗೆ ಉದ್ಯೋಗ ಕೇಳಿ ಬರುವ ವಿವಾಹಿತ ಮಹಿಳೆಯರಿಗೆ ಸಂಸ್ಥೆಯ ಆವರಣದೊಳಕ್ಕೆ ಪ್ರವೇಶಿಸಲೂ ಅನುಮತಿ ನೀಡುತ್ತಿಲ್ಲ. ಕಂಪನಿಯ ಗೇಟ್ ಒಳಗೆ ಪ್ರವೇಶಿಸುವ ಮುನ್ನವೇ ಅಲ್ಲಿನ ಭದ್ರತಾ ಸಿಬ್ಬಂದಿ ವೈವಾಹಿಕ ಸ್ಥಿತಿಯ ಬಗ್ಗೆ ಕೇಳುತ್ತಾರೆ ಎಂದು ವರದಿ ಹೇಳಿದೆ.

ವಿವಾಹಿತ ಮಹಿಳೆಯರು ಕೌಟುಂಬಿಕ ಕರ್ತವ್ಯಗಳು, ಗರ್ಭಧಾರಣೆ ಮತ್ತು ಹೆಚ್ಚು ಗೈರಾಗುತ್ತಾರೆ ಎಂಬ ಕಾರಣಗಳನ್ನು ನೀಡಿ ಕಂಪನಿಯು ಉದ್ಯೋಗ ನೀಡುತ್ತಿಲ್ಲ ಎಂದು ಅಲ್ಲಿನ ಹಾಲಿ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

‘ಸಾಂಸ್ಕೃತಿಕ ಹಾಗೂ ಸಾಮಾಜಿಕ ವಿಷಯಕ್ಕೆ ಸಂಬಂಧಿಸಿದ ಕೆಲವು ಕಾರಣಗಳಿಂದಾಗಿ ವಿವಾಹಿತೆಯರಿಗೆ ಫಾಕ್ಸ್‌ಕಾನ್‌ ಘಟಕದಲ್ಲಿ ಉದ್ಯೋಗ ನೀಡದೆ ತಿರಸ್ಕರಿಸಲಾಗುತ್ತಿದೆ’ ಎಂದು ಕಂಪನಿ ತೊರೆದಿರುವ ಫಾಕ್ಸ್‌ಕಾನ್‌ ಇಂಡಿಯಾದ ಮಾನವ ಸಂಪನ್ಮೂಲ ವಿಭಾಗದ ಕಾರ್ಯ ನಿರ್ವಾಹಕ ಅಧಿಕಾರಿ ಎಸ್‌. ಪಾಲ್‌ ಹೇಳಿದ್ದಾರೆ.

‘ಹಿಂದೂ ಮಹಿಳೆಯರು ಮಾಂಗಲ್ಯ ಸೇರಿ ಚಿನ್ನದ ಆಭರಣಗಳನ್ನು ಧರಿಸುತ್ತಾರೆ. ಇದರಿಂದ ಐಫೋನ್‌ ತಯಾರಿಕಾ ಕೆಲಸಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ, ವಿವಾಹಿತೆಯರಿಗೆ ನೇಮಕಕ್ಕೆ ಅವಕಾಶ ನೀಡಲು ಹಿಂದೇಟು ಹಾಕಲಾಗುತ್ತಿದೆ’ ಎಂದು ಈ ಮೂಲಗಳು ತಿಳಿಸಿವೆ ಎಂದೂ ವರದಿ ಹೇಳಿದೆ.

ಆದರೆ, ಕಂಪೆನಿಯ ಅಧಿಕ ಉತ್ಪಾದನಾ ಅವಧಿಯ ವೇಳೆ ಹಾಗೂ ತೈವಾನ್‌ನಲ್ಲಿ ಉದ್ಯೋಗಿಗಳ ಕೊರತೆ ಎದುರಿಸುವ ಸಂದರ್ಭದಲ್ಲಿ ತನ್ನ ನಿಯಮವನ್ನು ಸಡಿಲಗೊಳಿಸುತ್ತದೆ. ಕೆಲ ಸಂದರ್ಭಗಳಲ್ಲಿ ಉದ್ಯೋಗ ಏಜನ್ಸಿಗಳೂ ಮಹಿಳೆಯರ ವೈವಾಹಿಕ ಸ್ಥಿತಿಯನ್ನು ಮರೆಮಾಚಿ ಸಹಾಯ ಮಾಡಿವೆ ಎಂದು ವರದಿ ವಿವರಿಸಿದೆ.

ಬಾಹ್ಯ ಏಜೆನ್ಸಿಗಳ ಮೂಲಕ ಫಾಕ್ಸ್‌ಕಾನ್ ಉದ್ಯೋಗಿಗಳ ನೇಮಕಾತಿ ನಡೆಸುತ್ತದೆ. ಈ ಏಜೆನ್ಸಿಗಳು ಅಧಿಕೃತ ಸೇವಾ ಪೂರೈಕೆದಾರರು ಎಂದು ತಮಿಳುನಾಡು ಸರ್ಕಾರದಿಂದ ನೋಂದಣಿ ಪಡೆದಿವೆ. ಆದರೆ ಉದ್ಯೋಗ ನೀಡುವ ವೇಳೆ ನಡೆಸುವ ತಾರತಮ್ಯದ ಕುರಿತ ಪ್ರಶ್ನೆಗಳಿಗೆ ಸರ್ಕಾರವಾಗಲಿ, ಈ ಏಜೆನ್ಸಿಗಳಾಗಲಿ ಪ್ರತಿಕ್ರಿಯಿಸಿಲ್ಲ ಎಂದು ವರದಿ ಹೇಳಿದೆ.

ಇದನ್ನೂ ಓದಿ : ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...