Homeಕರ್ನಾಟಕಫೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಮಧ್ಯಂತರ ರಿಲೀಫ್​; ಖುದ್ದು ಹಾಜರಾತಿಗೂ ವಿನಾಯಿತಿ

ಫೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಮಧ್ಯಂತರ ರಿಲೀಫ್​; ಖುದ್ದು ಹಾಜರಾತಿಗೂ ವಿನಾಯಿತಿ

- Advertisement -
- Advertisement -

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ಬಿಜೆಪಿ ಹಿರಿಯ ನಾಯಕರಿಗೆ ಮಧ್ಯಂತರ ರಿಲೀಫ್ ನೀಡಿದೆ.

ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದ್ದು, ಈ ಮೂಲಕ ಬಿಎಸ್ ವೈಗೆ ರಿಲೀಫ್ ಸಿಕ್ಕಿದೆ.

ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಕಾಗ್ನಿಜೆನ್ಸ್, ಸಮನ್ಸ್​ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್​, ಬಿಎಸ್​ವೈ ಖುದ್ದು ಹಾಜರಾತಿಗೂ ವಿನಾಯಿತಿ ಕೊಟ್ಟಿದೆ. ಬಿಎಸ್​ವೈ ಅರ್ಜಿ ಬಗ್ಗೆ ಇನ್ನೂ ಹೆಚ್ಚಿನ ಹಾಗೂ ವಿವರವಾದ ವಿಚಾರಣೆ ಆಗತ್ಯವಿದೆ ಎಂದು ಕೋರ್ಟ್​ ತಿಳಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್.​ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಫೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು. ಈ ಹಿಂದೆ ಪ್ರಕರಣ ರದ್ದು ಕೋರಿ ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇಂದು (ಶುಕ್ರವಾರ) ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಇದೀಗ ಮಾಜಿ ಸಿಎಂಗೆ ಮಧ್ಯಂತರ ರಿಲೀಫ್ ನೀಡಿದೆ.

ಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...