Homeಅಂತರಾಷ್ಟ್ರೀಯಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

- Advertisement -
- Advertisement -

ಇಂದು ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮೆಡಿಟರೇನಿಯನ್ ನಗರದ ಚರ್ಚ್‌ನಲ್ಲಿ ನಡೆದ ಚಾಕು ದಾಳಿಯ ಬಗ್ಗೆ ’ಫ್ರೆಂಚ್ ಭಯೋತ್ಪಾದನಾ ವಿರೋಧಿ ಪ್ರಾಸಿಕ್ಯೂಟ‍ರ್‌’ ತನಿಖೆ ನಡೆಸುತ್ತಿದ್ದಾರೆ. ಭಯೋತ್ಪಾದನಾ ಪ್ರೇರಿತ ದಾಳಿಯ ಬಗ್ಗೆ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕಚೇರಿ ಮತ್ತು ರಾಷ್ಟ್ರೀಯ ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Explainer: ಜೀನೋಮ್ ಎಡಿಟಿಂಗ್‌ಗೆ ರಸಾಯನಶಾಸ್ತ್ರದ ನೊಬೆಲ್ ಮತ್ತು ವಿವಾದ

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ನೈಸ್‌ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೇಯರ್‌ ಎಸ್ಟ್ರೋಸಿ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿಯ ಶಾಸಕರು ಸಂತ್ರಸ್ತರಿಗೆ ಒಗ್ಗಟ್ಟಿನಿಂದ ಒಂದು ನಿಮಿಷದ ಮೌನವನ್ನು ಆಚರಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲ್ಲಾಹನ ಹೆಸರಲ್ಲಿ ಮಹಿಳೆಯರ ಕೊಲೆ.
    ಇದನ್ನು ಯಾವುದೇ ಕಾರಣಕ್ಕೂ ಇಸ್ಲಾಮ್ ಧರ್ಮ ಒಪ್ಪುವುದಿಲ್ಲ.
    ಇದರ ಹಿಂದೆ ಯಾವುದೋ ಪಿತೂರಿ ಇರಬಹುದು ಸರಿಯಾದ ತನಿಖೆ ನಡೆದು ಅಪರಾಧಿ ಗೆ ಕಠಿಣವಾದ ಶಿಕ್ಷೆಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...