Homeಅಂತರಾಷ್ಟ್ರೀಯಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

- Advertisement -
- Advertisement -

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 

18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆ, ನಾಜಿ ಜರ್ಮನಿಯ ವಿರುದ್ಧ ಹೋರಾಡಿದ “ಪ್ರತಿರೋಧದ ವ್ಯಕ್ತಿಗಳ” ಗೌರವಾರ್ಥವಾಗಿ ಬಿಡುಗಡೆ ಮಾಡಲಾದ ಅಂಚೆಚೀಟಿಯೊಂದಿಗೆ ನೂರ್ ಅವರನ್ನು ಗೌರವಿಸಿದೆ. ಎರಡನೇ ಮಹಾಯುದ್ಧದ 80 ವರ್ಷಗಳನ್ನು ಗುರುತಿಸಲು ಈ ತಿಂಗಳು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಸೆಟ್‌ನಲ್ಲಿ ಆಯ್ಕೆಯಾದ ಒಂದು ಡಜನ್ ಯುದ್ಧ ವೀರರು ಮತ್ತು ನಾಯಕಿಯರಲ್ಲಿ ಅವರು ಒಬ್ಬರು.

“ಯುದ್ಧದ ಅಂತ್ಯದ 80 ನೇ ಮಹತ್ವದ ವಾರ್ಷಿಕೋತ್ಸವದಂದು ಫ್ರಾನ್ಸ್ ನೂರ್ ಇನಾಯತ್ ಖಾನ್ ಅವರಿಗೆ ಅಂಚೆ ಚೀಟಿ ನೀಡಿ ಗೌರವಿಸಿರುವುದು ನನಗೆ ಸಂತೋಷ ತಂದಿದೆ” ಎಂದು ನೂರ್ ಅವರ ಜೀವನ ಚರಿತ್ರೆ – ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ ನ ಲಂಡನ್ ಮೂಲದ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. 

“ನೂರ್ ಫ್ಯಾಸಿಸಂ ವಿರುದ್ಧದ ಹೋರಾಟದಲ್ಲಿ ತನ್ನ ಪ್ರಾಣವನ್ನು ತ್ಯಾಗ ಮಾಡಿದಳು. ಅವಳು ಪ್ಯಾರಿಸ್‌ನಲ್ಲಿ ಬೆಳೆದಳು, ಇಂಗ್ಲೆಂಡ್‌ನಲ್ಲಿ ಯುದ್ಧ ಪ್ರಯತ್ನದಲ್ಲಿ ಸೇರಿಕೊಂಡಳು, ಮತ್ತು ಫ್ರಾನ್ಸ್‌ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವಳ ಮುಖವನ್ನು ನೋಡುವುದು ಅದ್ಭುತವಾಗಿದೆ,” ಎಂದು ಅವರು ಹೇಳಿದರು.

ಪ್ರತಿಯೊಂದು ಅಂಚೆಚೀಟಿ ಛಾಯಾಚಿತ್ರದಿಂದ ತೆಗೆದ ಕೆತ್ತನೆಯ ರೂಪದಲ್ಲಿದ್ದು, ನೂರ್ ಅವರ ಮೇಲಿನ ಅಂಚೆಚೀಟಿ ಅವರ ಬ್ರಿಟಿಷ್ ಮಹಿಳಾ ಸಹಾಯಕ ವಾಯುಪಡೆ (WAAF) ಸಮವಸ್ತ್ರವನ್ನು ಪ್ರದರ್ಶಿಸುತ್ತದೆ.

“ನೂರ್ ಅವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಬ್ರಿಟನ್ 2014 ರಲ್ಲಿ ಅವರನ್ನು ಗೌರವಿಸಿತು. ಈಗ ಬ್ರಿಟನ್ ಮತ್ತು ಫ್ರಾನ್ಸ್ ಅವರ ಗೌರವಾರ್ಥವಾಗಿ ಅಂಚೆಚೀಟಿ ಹೊರಡಿಸಿವೆ. ಅವರ ಪೂರ್ವಜರ ದೇಶವಾದ ಭಾರತವು ಕೂಡ ಅಂಚೆಚೀಟಿಯೊಂದಿಗೆ ಅವರನ್ನು ಗೌರವಿಸುವ ಸಮಯ ಬಂದಿದೆ” ಎಂದು ಬಸು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...