Homeಮುಖಪುಟಸಿರಿಯಾ ಅಧ್ಯಕ್ಷ ಅಸ್ಸಾದ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಫ್ರಾನ್ಸ್

ಸಿರಿಯಾ ಅಧ್ಯಕ್ಷ ಅಸ್ಸಾದ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಫ್ರಾನ್ಸ್

- Advertisement -
- Advertisement -

2013ರಲ್ಲಿ ರಾಸಾಯನಿಕ ದಾಳಿಗೆ ಸಂಬಂಧಿಸಿದಂತೆ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧಾಪರಾಧಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ಫ್ರಾನ್ಸ್ ಅಂತಾರಾಷ್ಟ್ರೀಯ ಬಂಧನ ವಾರಂಟ್ ಜಾರಿ ಮಾಡಿದೆ ಎಂದು ಬುಧವಾರ ವರದಿಯಾಗಿದೆ.

ಆಗಸ್ಟ್ 2013 ರಲ್ಲಿ ಡಮಾಸ್ಕಸ್ ಬಳಿ ಸರಿನ್ ಗ್ಯಾಸ್ ದಾಳಿಯಿಂದಾಗಿ 1,400 ಕ್ಕೂ ಹೆಚ್ಚು ಜನರು ಉಸಿರುಗಟ್ಟಿ ಸಾವನ್ನಪ್ಪಿದರು.

ಈ ಪ್ರಕರಣ ಕುರಿತಂತೆ 2021 ರಿಂದ ವಿಚಾರಣೆ ನಡೆಸುತ್ತಿರುವ ಪ್ಯಾರಿಸ್ ನ್ಯಾಯಾಲಯದ ಘಟಕವು ಅಸ್ಸಾದ್ ಮಾತ್ರವಲ್ಲದೆ, ಅವರ ಸಹೋದರ ಮಹರ್, ನಾಲ್ಕನೇ ವಿಭಾಗದ ಡಿ-ಫ್ಯಾಕ್ಟೋ ಮುಖ್ಯಸ್ಯ ಸಿರಿಯನ್ ಸೇನೆಯ ಗಣ್ಯ ಮಿಲಿಟರಿ ಘಟಕ ಮತ್ತು ಇಬ್ಬರು ಜನರಲ್‌ಗಳ ಬಂಧನಕ್ಕಾಗಿಯೂ ಅಂತರರಾಷ್ಟ್ರೀಯ ವಾರಂಟ್‌ಗಳನ್ನು ನೀಡಿದೆ.

ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ವಿಶ್ವದ ಎಲ್ಲಿಯಾದರೂ ಮಾಡಿದ ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಫ್ರಾನ್ಸ್ ವಿಚಾರಣೆಗೆ ಒಳಪಡಿಸಬಹುದು.

ಸಿರಿಯನ್ ಸೆಂಟರ್ ಫಾರ್ ಮೀಡಿಯಾ ಮತ್ತು ಫ್ರೀಡಂ ಆಫ್ ಎಕ್ಸ್‌ಪ್ರೆಶನ್ (SCM) ಎನ್‌ಜಿಒ, ವಕೀಲರ ಸಂಘ ಓಪನ್ ಸೊಸೈಟಿ ಜಸ್ಟೀಸ್ ಇನಿಶಿಯೇಟಿವ್ (ಒಎಸ್‌ಜೆಐ) ಮತ್ತು ಸಿರಿಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ದಾಖಲಿಸುವ ಸಿರಿಯನ್ ಆರ್ಕೈವ್ ಸಂಸ್ಥೆ ಸಲ್ಲಿಸಿದ ದೂರಿನ ನಂತರ ತನಿಖೆ ನಡೆಸಲಾಯಿತು.

ಬಂಧನದ ವಾರಂಟ್ ಕುರಿತು ಎಸ್‌ಸಿಎಂ ಅಧ್ಯಕ್ಷ ಮಜೆನ್ ದರ್ವಿಶ್ ಅಸ್ಸಾದ್ ಮಾತನಾಡಿದ್ದು, ”ಇದೊಂದು ದೊಡ್ಡ ಬೆಳವಣಿಗೆಯಾಗಿದೆ” ಎಂದು ಹೇಳಿದರು.

”ಸಿರಿಯಾದ ಅಧ್ಯಕ್ಷರಿಗೆ ತಿಳಿಯದೆ ರಾಸಾಯನಿಕ ದಾಳಿ ನಡೆಯಲು ಸಾಧ್ಯವಿಲ್ಲ ಎಂದು ಸ್ವತಂತ್ರ ನ್ಯಾಯಾಲಯ ಹೇಳಿದೆ. ಅವರು ಜವಾಬ್ದಾರಿಯನ್ನು ಹೊಂದಿದ್ದಾರೆ ಮತ್ತು ಜವಾಬ್ದಾರಿಯುತರಾಗಿರಬೇಕು” ಎಂದು ಅವರು AFP ಗೆ ತಿಳಿಸಿದರು.

ಓಪನ್ ಸೊಸೈಟಿ ಜಸ್ಟೀಸ್ ಇನಿಶಿಯೇಟಿವ್‌ನ ಸ್ಟೀವ್ ಕೋಸ್ಟಾಸ್ ಮಾತಣಾಡಿ, ”ಇದೊಂದು ಐತಿಹಾಸಿಕ ಕ್ಷಣ. ಅತ್ಯಂತ ಗಂಭೀರವಾದ ಅಂತರರಾಷ್ಟ್ರೀಯ ಅಪರಾಧಗಳಿಗೆ ಯಾವುದೇ ವಿನಾಯಿತಿ ಇಲ್ಲ ಎಂಬ ತತ್ವವನ್ನು ಸ್ಥಾಪಿಸಲು ಫ್ರಾನ್ಸ್‌ಗೆ ಅವಕಾಶವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...