Homeಮುಖಪುಟವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರವು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸುವುದನ್ನು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ನಿಝಾಮುಧ್ಥಿನ್ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಂದಾಗಿ ಶಿಕ್ಷಣದ ವ್ಯಾಪಾರೀಕರಣಕ್ಕೆ ಅವಕಾಶವಾಗುತ್ತಿದೆ. ಕೊರೊನಾ ಲಾಕ್‌ಡೌನ್‌ನಿಂದ ಜನರು ಸಾಕಷ್ಟು ಬಳಲಿರುವಾಗ ಸರ್ಕಾರ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

2020-21 ಸಾಲಿಗೆ ಅನ್ವಯವಾಗುವಂತೆ ಖಾಸಗಿ ಕೋಟಾದಡಿಯಲ್ಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಕ್ಲಿನಿಕಲ್‌ ಸೀಟುಗಳಿಗೆ ಶೇ 30% ಅಂದರೆ ಈಗಿರುವ ರೂ 8.7 ಲಕ್ಷದಿಂದ ರೂ 11.5 ಲಕ್ಷದವರೆಗೆ ಹೆಚ್ಚಳವಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟಿನ ಶುಲ್ಕವನ್ನು ಶೇ 20% ಅಂದರೆ ರೂ 5.8 ಲಕ್ಷದಿಂದ ರೂ 7.13 ಲಕ್ಷವರೆಗೆ ಹೆಚ್ಚಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನ ಇತರೆ ರಾಜ್ಯಗಳಿಗೆ ಹೋಲಿಸಿದರೆ ತುಂಬಾ ಕಡಿಮೆಯಿದೆ. ಈ ಕಡಿಮೆ ಶಿಷ್ಯ ವೇತನವೂ ಸಹ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಸೀಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಭರಿಸಲು ಶಿಕ್ಷಣದ ಸಾಲುಗಳನ್ನು ಪಡೆದುಕೊಳ್ಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಲಾಕ್ ಡೌನ್ ಜಾರಿ ಈ ಇರುವುದರಿಂದ ತೀವ್ರ ಆರ್ಥಿಕ ಸಂಕಷ್ಟಗಳಿಂದ ಜನರು ನರಳುತ್ತಿದ್ದಾರೆ. ಈ ಕೊರೋನಾ ಲಾಕ್ ಡೌನ್ ಸಂದರ್ಭವನ್ನು ಸರ್ಕಾರ ಶುಲ್ಕ ಹೆಚ್ಚಳ ಮಾಡಲು ದುರ್ಬಳಕೆ ಮಾಡಿಕೊಂಡು (ಇಂತಹ ಸಮಯದಲ್ಲಿ ವಿದ್ಯಾರ್ಥಿ ಸಮುದಾಯ ಹೋರಾಟ ನಡೆಸಲು ಸಹ ಅವಕಾಶವಿಲ್ಲದಂತಾಗಿದೆ.) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಲಾಗಿದೆ.

ಪ್ರತಿವರ್ಷವೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಏರಿಕೆ ಮಾಡುತ್ತಿದೆ ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತಗೊಳಿಸುವ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಭವಿಷ್ಯಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಲಾಗಿದೆ.

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣದ ನೀಡಲು ಶುಲ್ಕ ಇಳಿಸಲು ಮುಂದಾಗಬೇಕು. ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಹಾಗೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಏಕರೂಪ ಶಾಸನ ಜಾರಿಗೆ ತರಬೇಕು ಎಂದು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ಒತ್ತಾಯಿಸುತ್ತಿದೆ.


ಇದನ್ನೂ ಓದಿ: ಗ್ರಾಮಭಾರತ – 2: ಭದ್ರಾವತಿಗೆ ಬಾರದ ತಮಿಳುನಾಡಿನ ಭತ್ತ ಕಟಾವು ಯಂತ್ರಗಳು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...