HomeUncategorizedಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

ಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

- Advertisement -
- Advertisement -

ಲಾಹೋರ್: ಟ್ರಾವೆಲ್ ಏಜೆಂಟ್‌ನಿಂದ ವಂಚನೆಗೊಳಗಾಗಿ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದಲ್ಲಿರುವ ಹೈದರಾಬಾದ್‌ಗೆ  ಕರೆತರಲಾಗಿತ್ತು.  ಏಜೆಂಟ್ ದುಬೈನಲ್ಲಿ ಕೆಲಸ ಕೊಡಿಸುವ ಭರವಸೆಯೊಂದಿಗೆ ಅವಳನ್ನು ವಂಚಿಸಿ, ದುಬೈ ಬದಲು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ಜಿಲ್ಲೆಗೆ ಕರೆತಂದಿದ್ದನು.

ಸೋಮವಾರ ಹಮೀದಾ ಕರಾಚಿಯಿಂದ ವಿಮಾನದ ಮೂಲಕ ಇಲ್ಲಿಗೆ ಬಂದರು ಮತ್ತು ತರುವಾಯ ಅವರು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಾನೊ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾನು ಭಾರತಕ್ಕೆ ಹಿಂದಿರುಗುವ ಭರವಸೆಯನ್ನು ಕಳೆದುಕೊಂಡಿದ್ದೇನು. ಆದರೆ ಈ ದಿನವನ್ನು ನೋಡಲು ಅದೃಷ್ಟವಂತೆ ಎಂದು ಅವರು ಹೇಳಿದ್ದಾರೆ.

2022 ರಲ್ಲಿ, ಸ್ಥಳೀಯ ಯೂಟ್ಯೂಬರ್ ವಲಿಯುಲ್ಲಾ ಮರೂಫ್ ರ ಜೊತೆ, ಹಮೀದಾ ಬಾನೋ 2002ರಲ್ಲಿ ಭಾರತವನ್ನು ತೊರೆದು ಬಂದ ತನ್ನ ಕಥೆಯನ್ನು ಹೇಳಿಕೊಂಡಿದ್ದರು. ನೇಮಕಾತಿ ಏಜೆಂಟ್ ಯೊಬ್ಬರು ದುಬೈನಲ್ಲಿ ಅಡುಗೆಯ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇದರ ಬದಲಾಗಿ ಅವರನ್ನು ಮೋಸಗೊಳಿಸಿ ಪಾಕಿಸ್ತಾನಕ್ಕೆ ಕರೆ ತರಲಾಗಿತ್ತು. ಮರೂಫ್ ಅವರು  ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದ್ದರು. ಅವರ ಮಗಳು ಯಾಸ್ಮೀನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದರು.

ಮರೂಫ್ ಅವರೊಂದಿಗಿನ ಮಾತುಕತೆಯಲ್ಲಿ, ಹಮೀದಾ ಬಾನೊ ಅವರು ಪಾಕಿಸ್ತಾನಕ್ಕೆ ಬರುವ ಮೊದಲು ಭಾರತದಲ್ಲಿ ತನ್ನ ಗಂಡನ ಮರಣದ ನಂತರ ತನ್ನ ನಾಲ್ಕು ಮಕ್ಕಳನ್ನು ಸಲಹುವುದಕ್ಕಾಗಿ ಕೆಲಸವನ್ನು ಹುಡುಕುತ್ತಿದ್ದೆ ಎಂದು ಹೇಳಿದ್ದರು. ಇಲ್ಲಿಗೆ ಬರುವ ಮೊದಲು ದೋಹಾ, ಕತಾರ್, ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಯಾವುದೇ ತೊಂದರೆಯಿಲ್ಲದೆ ಅಡುಗೆಯವಳಾಗಿ ಕೆಲಸ ಮಾಡಿದ್ದೆ ಎಂದು ತಿಳಿಸಿದ್ದರು.

ಪಾಕಿಸ್ತಾನದಲ್ಲಿ ತನ್ನ 22 ವರ್ಷಗಳ ವಾಸ್ತವ್ಯದ ಸಮಯದಲ್ಲಿ, ಬಾನೊ ಕರಾಚಿಯ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಅವರು ಕೋವಿಡ್ -19 ನಿಂದ ನಿಧನರಾಗಿದ್ದರು. ಅಂದಿನಿಂದ ಅವರು ತನ್ನ ಮಲಮಗನೊಂದಿಗೆ ವಾಸಿಸುತ್ತಿದ್ದಳು.

ಇದನ್ನು ಓದಿ….ಶೋಷಿತ ಸಮುದಾಯಗಳು ಪರಿಣಾಮಕಾರಿ ಹೋರಾಟದ ಮಾರ್ಗ ಕಂಡುಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...