Homeಕರ್ನಾಟಕವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

- Advertisement -
- Advertisement -

ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಹೆಸರಿನಲ್ಲಿ ವ್ಯಕ್ತಿಯನ್ನು ಮೋಸಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ವಿವಾದಕ್ಕೆ ತೆರೆ ಬಿದ್ದಿದೆ ಎಂದು ನಟ ಹೇಳಿದ್ದಾರೆ. ನಟನ ಹೆಸರು ಬಳಸಿಕೊಂಡು 25 ಕೋಟಿ ವಂಚನೆಗೆ ಯತ್ನಿಸಿದ ಘಟನೆ ಹಲವು ಬೆಳವಣಿಗೆಗೆ ಕಾರಣವಾಗಿತ್ತು.

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ನಡುವೆ ಒಡಕಿಗೆ ಕಾರಣವಾಗಬಹುದು ಎನ್ನಲಾಗುತ್ತಿತ್ತು. ಇದಕ್ಕೆ ನಿರ್ಮಾಪಕ ಉಮಾಪತಿ ಕೂಡ ಸ್ಪಷ್ಟನೆ ನೀಡಿದ್ದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ದರ್ಶನ್, ’ಪ್ರಕರಣವನ್ನು ಇಲ್ಲಿಗೆ ಬಿಟ್ಟುಬಿಡಿ, ನಾವು ಮಾತನಾಡಿಕೊಳ್ಳುತ್ತೇವೆ, ನಿರ್ಮಾಪಕ ಉಮಾಪತಿಯವರು ತಪ್ಪು ಮಾಡಿದ್ದಾರೆ ಎಂದು ನಾನು ಈಗಲೂ ಹೇಳುವುದಿಲ್ಲ, ಅವರು ನಿರ್ಮಾಪಕರು, ಯಾವತ್ತಿದ್ದರೂ ನಿರ್ಮಾಪಕರೇ, ಇದರಲ್ಲಿ ಅವರ ಕೈವಾಡ ಇಲ್ಲ. ಅವರನ್ನು ಬಿಟ್ಟುಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ನಿರ್ಮಾಪಕ ಉಮಾಪತಿ ಕೂಡ, ’ದರ್ಶನ್ ಅವರು ನನಗೆ ಮುಖ್ಯ. ನನ್ನ ಹಾಗೂ ದರ್ಶನ್ ಅವರ ನಡುವಿನ ಸ್ನೇಹ ಇನ್ನೂ ಚೆನ್ನಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸತ್ಯಾಂಶ ಪೊಲೀಸ್​ ತನಿಖೆಯಿಂದ ಹೊರ ಬೀಳಲಿದೆ ಎಂದಿದ್ದರು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ಬ್ಯಾಂಕಿನಲ್ಲಿ 25 ಕೋಟಿ ರೂ.ಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ ಹರ್ಷ್ ಮೆಲಾಂಟ ಎಂಬುವವರನ್ನು ಆರೋಪಿ ಅರುಣಕುಮಾರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ಆಕೆ, ಮೆಲಂಟಾ ಅವರನ್ನು ಸಂಪರ್ಕಿಸಿ, ನಟ ದರ್ಶನಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಒದಗಿಸಿದ್ದಿರಿ ಎಂದು ಆರೋಪಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎನ್ನಲಾಗಿದೆ.

ವಿಷಯ ಹೊರಗೆ ಬಾರದಂತೆ ನೋಡಿಕೊಳ್ಳಲು ತನಗೆ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಈ ಮಹಿಳೆ ನಕಲಿ ಎಂಬುದು ಹರ್ಷ ಅವರಿಗೆ ಗೊತ್ತಾಗಿ, ಅವರು ತಕ್ಷಣ ಜುಲೈ 3 ನೇ ತಾರೀಕು ಮೈಸೂರು ನಗರದ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ಆಧರಿಸಿ, ಅರುಣಕುಮಾರಿ ಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಪ್ರಕರಣದಲ್ಲಿ ರಾಬರ್ಟ್​ ಚಿತ್ರದ ನಿರ್ಮಾಪಕ ಉಮಾಪತಿ ಅವರ ಹೆಸರು ತಳುಕು ಹಾಕಿಕೊಂಡು ವಿವಾದ ಸೃಷ್ಟಿಯಾಗಿತ್ತು. ಎಲ್ಲರ ಕಣ್ಣು ಉಮಾಪತಿ ಕಡೆಗೆ ತಿರುಗಿತ್ತು. ಈಗ ನಟ ಮತ್ತು ನಿರ್ಮಾಕಪ ಈ ವಿವಾದಕ್ಕೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...