Homeಚಳವಳಿಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

- Advertisement -
- Advertisement -

ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರ- ಕರ್ನಾಟಕವು ಕನ್ನಡದ ಹೆಸರಾಂತ ದಿಟ್ಟ ಪತ್ರಕರ್ತೆ ಹುತಾತ್ಮ ಗೌರಿ ಲಂಕೇಶ್‌ರವರ ಹೆಸರಿನಲ್ಲಿ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಬೆಂಗಳೂರಿಗೆ ವಲಸೆ ಬಂದು ನೆಲೆ ಕಂಡುಕೊಂಡಿರುವ ಬಡ ವಲಸೆ ಕಾರ್ಮಿಕರಿಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್ ಸೇವೆ ಒದಗಿಸಲು ಮುಂದಾಗಿದೆ.

ಶನಿವಾರ ಮಧ್ಯಾಹ್ನ 11 ಗಂಟೆಗೆ ಗೌರಿ ಲಂಕೇಶ್‌ರವರ ಸಹೋದರಿ, ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್‌ರವರು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಂಬುಲೆನ್ಸ್‌ಗೆ ಚಾಲನೆ ನೀಡಲಿದ್ದಾರೆ ಎಂದು ಕಲೀಂ ಉಲ್ಲಾರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಬಡಜನರಿಗೆ ಆರೋಗ್ಯ ಸೇವೆಗಳು ಸುಲಭಕ್ಕೆ ಸಿಗುತ್ತಿಲ್ಲ. ಬೆಂಗಳೂರಿನ ಮಹಾದೇವಪುರ ಸುತ್ತಾ ಮುತ್ತ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಕೆಲಸ ಅರಸಿ ವಲಸೆ ಬಂದ ಸಾವಿರಾರು ಜನರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಭಯವಿರುವುದರಿಂದ ಅವರಿಗೆ ಉಪಯೋಗವಾಗಲೆಂದು ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರು ತಮ್ಮ ಜೀವನಪೂರ್ತಿ ಬಡವರು, ತಳಸಮುದಾಯದವರ ಪರ ಹೋರಾಡಿದರು ಮತ್ತು ಬರೆದರು. ಹಾಗಾಗಿ ನಮ್ಮ ಆಂಬುಲೆನ್ಸ್ ಸೇವೆಗೆ ಅವರ ಹೆಸರನ್ನು ಇಟ್ಟಿದ್ದೇವೆ. ಗೌರಿ ಲಂಕೇಶ್ ನಮ್ಮೊಳಗೆ ಸದಾ ಜೀವಂತವಿದ್ದಾರೆ ಎಂದು ಕಲೀಂ ಉಲ್ಲಾ ತಿಳಿಸಿದ್ದಾರೆ.


ಇದನ್ನೂ ಓದಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯ ಅಧೋಗತಿಯ ಹಾದಿ ಹಿಡಿದದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...